ಕರ್ನಾಟಕ

ಅತಂತ್ರ ಫಲಿತಾಂಶ ಬಂದರೆ ಜೆಡಿಎಸ್‌ ಜೊತೆ ಮೈತ್ರಿಗೆ ಸಿದ್ದರಾಮಯ್ಯ ಅಡ್ಡಿ

Pinterest LinkedIn Tumblr


ಬೆಂಗಳೂರು: ಒಂದು ವೇಳೆ, ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಹುಮತ ಬರದಿದ್ದರೆ ಆಗ ಜೆಡಿಎಸ್‌ ಬೆಂಬಲ ಕೋರುವುದು ಕಾಂಗ್ರೆಸ್‌ಗೆ ಅನಿವಾರ್ಯ.

ಇಂತಹ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗುವುದನ್ನು ದೇವೇಗೌಡ ಹಾಗೂ ಕುಮಾರಸ್ವಾಮಿ ಒಪ್ಪಿಕೊಳ್ಳುವ ಸಾಧ್ಯತೆ ತೀರಾ ಕಡಿಮೆ.

ಸಿದ್ದರಾಮಯ್ಯ ಅವರು ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿ ಮುಖ್ಯಮಂತ್ರಿಯಾಗಿರುವುದು ಮತ್ತು ನಂತರದಲ್ಲಿ ಜೆಡಿಎಸ್‌ನ ಏಳು ಶಾಸಕರನ್ನು ಕಾಂಗ್ರೆಸ್‌ಗೆ ಸೆಳೆದುಕೊಂಡಿರುವುದು ಜೆಡಿಎಸ್‌ ವರಿಷ್ಠ ಮತ್ತು ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ
ಕೂಡ ಈ ವಿಚಾರದಲ್ಲಿ ಸಿದ್ದರಾಮಯ್ಯ ಅವರೊಂದಿಗೆ ಮುನಿಸಿಕೊಂಡಿದ್ದಾರೆ. ಈ ಮಧ್ಯೆ, ಚುನಾವಣಾ ಪ್ರಚಾರದ ವೇಳೆ ದೇವೇಗೌಡರು ಮತ್ತು ಆ ಪಕ್ಷದ ವಿರುದಟಛಿ ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗಳು, ಅವರ ವರ್ತನೆ ದೇವೇಗೌಡ ಮತ್ತು ಕುಮಾರಸ್ವಾಮಿ ಅವರ ಸಿಟ್ಟನ್ನು ಹೆಚ್ಚಿಸಿದೆ. ಈ ಕಾರಣಕ್ಕಾಗಿಯೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಅವರನ್ನು ಸೋಲಿಸಲು ಎಲ್ಲ ರೀತಿಯ ಕಾರ್ಯತಂತ್ರಗಳನ್ನೂ ಜೆಡಿಎಸ್‌ ಹೆಣೆದಿತ್ತು.

ಈ ಎಲ್ಲಾ ಕಾರಣಗಳಿಂದಾಗಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಜತೆ ಹೋಗಲು ದೇವೇಗೌಡ ಮತ್ತು ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳುವುದಿಲ್ಲ.

ಅಲ್ಲದೆ, ಜೆಡಿಎಸ್‌ ಅಧಿಕಾರಕ್ಕೆ ಬಂದರೆ ದಲಿತರೊಬ್ಬರನ್ನು ಉಪಮುಖ್ಯಮಂತ್ರಿ ಮಾಡುವುದಾಗಿ ಜೆಡಿಎಸ್‌ ಈಗಾಗಲೇ ಘೋಷಿಸಿದೆ. ಇದನ್ನೇ ಮುಂದಿಟ್ಟುಕೊಂಡು ದಲಿತರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿ ಜೆಡಿಎಸ್‌
ಪಕ್ಷವನ್ನು ಕಾಂಗ್ರೆಸ್‌ನ ಸಮೀಪ ಬರುವಂತೆ ಮಾಡಿ ತಾವು ಮುಖ್ಯಮಂತ್ರಿ ಹುದ್ದೆಯಿಂದ ದೂರ ಉಳಿಯುವುದು. ಒಂದೊಮ್ಮೆ ದಲಿತರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿದರೂ, ಜೆಡಿಎಸ್‌ ಬೆಂಬಲಿಸದಿದ್ದರೆ ಅವರು
ಕೋಮುವಾದಿಗಳೊಂದಿಗೆ ಕೈಜೋಡಿಸಿದ್ದಾರೆ ಎಂಬ ತಮ್ಮ ಈಗಿನ ಆರೋಪ ನಿಜವಾಗಿದೆ ಎಂದು ಹೇಳಿಕೊಳ್ಳುವುದು ಸಿದ್ದರಾಮಯ್ಯ ಅವರ ಈ ಹೇಳಿಕೆ ಹಿಂದಿರುವ ಮರ್ಮ ಎಂದು ಹೇಳಲಾಗುತ್ತಿದೆ.

Comments are closed.