ಕರ್ನಾಟಕ

ತವರು ಕ್ಷೇತ್ರದಲ್ಲೇ ಸಿಎಂ ಸಿದ್ದರಾಮಯ್ಯ ಭಾರಿ ಮುಖಭಂಗ ! ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯ ಸೋಲು

Pinterest LinkedIn Tumblr

ಮೈಸೂರು: ತವರು ಕ್ಷೇತ್ರದಲ್ಲೇ ಸಿಎಂ ಸಿದ್ದರಾಮಯ್ಯ ಭಾರಿ ಮುಖಭಂಗ ಅನುಭವಿಸಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯ ಸೋಲು ಕಂಡಿದ್ದಾರೆ.

ಸಿದ್ದರಾಮಯ್ಯಗೆ ತವರು ಕ್ಷೇತ್ರದಲ್ಲಿ ಚಾಮುಂಡೇಶ್ವರಿ ಆಶೀರ್ವಾದ ದೊರೆಯಲಿಲ್ಲ. ಇಂದು ಪ್ರಕಟವಾದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸುಮಾರು 24 ಸಾವಿರ ಮತಗಳ ಅಂತರದಲ್ಲಿ ಸೋಲು ಕಂಡಿದ್ದಾರೆ. ಇದೇ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್ ನ ಜಿಟಿ ದೇವೇಗೌಡ ಅವರು ಜಯಭೇರಿ ಭಾರಿಸಿದ್ದಾರೆ.

ಹಾಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಷ್ಟಿತ ಕ್ಷೇತ್ರಗಳಲ್ಲಿ ಪ್ರಮುಖವಾಗಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಸೋಲು ಕಂಡಿದ್ದಾರೆ. ಚುನಾವಣೆಗೂ ಮೊದಲು ಸಿಎಂ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುವುದು ಬೇಡ..ಸೋಲಾಗಬಹುದು ಎಂದು ಕಾಂಗ್ರೆಸ್ ಪಕ್ಷದ ಆಂತರಿಕ ಸಮೀಕ್ಷೆಗಳು ಹೇಳಿದ್ದವು. ಇದೇ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರವನ್ನು ತಮ್ಮ ಎರಡನೇ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡಿದ್ದರು. ಇದೀಗ ತವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತಿದ್ದಾರೆ.

Comments are closed.