ಕರ್ನಾಟಕ

ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಉದ್ಬವಿಸುವುದಿಲ್ಲ : ಡಿವಿ ಸದಾನಂದಗೌಡ

Pinterest LinkedIn Tumblr

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದ್ದು, ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದು ಕೇಂದ್ರ ಸಚಿವ ಡಿವಿ ಸದಾನಂದಗೌಡ ಹೇಳಿದ್ದಾರೆ.

ಇತ್ತ ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಇತ್ತೀಚಿನ ವರದಿಗಳ ಅನ್ವಯ 222 ಕ್ಷೇತ್ರಗಳ ಪೈಕಿ ಬಿಜೆಪಿ 110 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಕ್ಷ 68 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಂತೆಯೇ ಜೆಡಿಎಸ್ ಪಕ್ಷ 43 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಡಿವಿ ಸದಾನಂದಗೌಡ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷ ಸ್ಪಷ್ಟ ಬಹುಮತದತ್ತ ದಾಪುಗಾಲಿರಿಸಿದೆ. ಹೀಗಾಗಿ ಬಿಜೆಪಿ ಪಕ್ಷ ಸ್ವಂತಬಲದ ಮೇಲೆ ಸರ್ಕಾರ ರಚನೆ ಮಾಡಲಿದೆ. ಜೆಡಿಎಸ್ ನೊಂದಿಗೆ ಮೈತ್ರಿ ಪ್ರಶ್ನೆಯೇ ಉದ್ಭವಾಗುವುದಿಲ್ಲ ಎಂದು ಹೇಳಿದ್ದಾರೆ.

Comments are closed.