ಕರ್ನಾಟಕ

ಕುಮಾರಸ್ವಾಮಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ರಾಜ್ಯಪಾಲರನ್ನು ಭೇಟಿಯಾಗಿ ಹಕ್ಕು ಮಂಡನೆ ಸಲ್ಲಿಸಿದ ಜೆಡಿಎಸ್-ಕಾಂಗ್ರೆಸ್ ನಾಯಕರು

Pinterest LinkedIn Tumblr

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ರಚನೆಗೆ ಕಾಂಗ್ರೆಸ್-ಜೆಡಿಎಸ್ ನಾಯಕರು ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದಾರೆ.

ರಾಜಭವನಕ್ಕೆ ತೆರಳಿದ ಜೆಡಿಎಸ್ ನಾಯಕ ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರಾದ ಸಿಎಂ ಸಿದ್ದರಾಮಯ್ಯ, ಗುಲಾಂ ನಬಿ ಆಜಾದ್, ಹೆಚ್ ಎಂ ರೇವಣ್ಣ ಕಾಂಗ್ರೆಸ್-ಜೆಡಿಎಸ್ ಗೆ ಸರ್ಕಾರ ರಚನೆ ಮಾಡುವುದಕ್ಕೆ ಅವಕಾಶ ನೀಡಬೇಕೆಂದು ರಾಜ್ಯಪಾಲರಲ್ಲಿ ಮನವಿ ಸಲ್ಲಿಸಿದ್ದಾರೆ.

ಜೆಡಿಎಸ್ ನೊಂದಿಗೆ ಸರ್ಕಾರ ರಚನೆ ಮಾಡುವುದಕ್ಕೆ ಬೆಂಬಲ ನೀಡುವುದರ ಬಗ್ಗೆ ಕಾಂಗ್ರೆಸ್ ನಾಯಕರು ರಾಜ್ಯಪಲಾರಿಗೆ ಪತ್ರ ನೀಡಿದ್ದಾರೆ.

“ಜೆಡಿಎಸ್ ಗೆ ಸರ್ಕಾರ ರಚನೆ ಮಾಡುವುದಕ್ಕೆ ಸಹಕಾರ ನೀಡಲು ಎಂದು ಕಾಂಗ್ರೆಸ್ ತೀರ್ಮಾನಿಸಿದೆ, ಈ ಹಿನ್ನೆಲೆಯಲ್ಲಿ ಬೆಂಬಲ ನೀಡಿರುವ ಪತ್ರವನ್ನು ರಾಜ್ಯಪಾಲರಿಗೆ ತಲುಪಿಸಲಾಗಿದೆ, ಉಳಿದ ತೀರ್ಮಾನಗಳನ್ನು ನಂತರ ಕೈಗೊಳ್ಳಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

“ಕುಮಾರಸ್ವಾಮಿ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡುವುದಕ್ಕೆ ಕಾಂಗ್ರೆಸ್ ಬೆಂಬಲ ನೀಡಲು ಎಐಸಿಸಿ ತೀರ್ಮಾನ ಕೈಗೊಂಡಿದೆ, ಈ ಬಗ್ಗೆ ರಾಜ್ಯಪಾಲರಿಗೆ ಪತ್ರ ನೀಡಲಾಗಿದೆ, ಉಳಿದ ವಿವರಗಳನ್ನು ನಂತರ ತಿಳಿಸಲಾಗುವುದು ಎಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Comments are closed.