ಕರ್ನಾಟಕ

ಚುನಾವಣೆಗೂ ಮೊದಲು ಕಾಂಗ್ರೆಸ್ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ ಪ್ರಸ್ತಾಪಿಸಬಾರದಿತ್ತು; ವೀರಪ್ಪ ಮೊಯ್ಲಿ

Pinterest LinkedIn Tumblr


ಹೊಸದಿಲ್ಲಿ: ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿ ಅತಿ ಹೆಚ್ಚಿನ ಸ್ಥಾನಗಳನ್ನು ಗಳಿಸಿರುವುದರ ಹಿಂದೆ ಬಿಜೆಪಿಯ ನಕಾರಾತ್ಮಕ ಪ್ರಚಾರ ಮತ್ತು ಜಾತಿ ಲೆಕ್ಕಾಚಾರದಲ್ಲಿ ಕಾಂಗ್ರೆಸ್ ಎಡವಿರುವುದು ಕಾರಣ ಎಂದು ಕಾಂಗ್ರೆಸ್ ಹಿರಿಯ ನಾಯಕ ಎಂ. ವೀರಪ್ಪ ಮೊಯ್ಲಿ ಹೇಳಿದ್ದಾರೆ.

ರಾಜ್ಯ ಚುನಾವಣಾ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಮೊಯ್ಲಿ ಅವರು, ಚುನಾವಣೆಗೂ ಮೊದಲು ಕಾಂಗ್ರೆಸ್ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವನ್ನು ಪ್ರಸ್ತಾಪಿಸಬಾರದಿತ್ತು. ಬಿಜೆಪಿ ರಾಜ್ಯದಲ್ಲಿ ಯಶಸ್ವಿಯಾಗಿ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಿತು. ಅಲ್ಲದೆ ಜಾತಿ ಲೆಕ್ಕಾಚಾರ ಮತ್ತು ಮತವಿಂಗಡಣೆಯನ್ನು ಗ್ರಹಿಸುವಲ್ಲಿ ಕಾಂಗ್ರೆಸ್ ಎಡವಿದ್ದು, ಸ್ಥಾನ ಕಳೆದುಕೊಳ್ಳಲು ಕಾರಣ ಎಂದು ಹೇಳಿದ್ದಾರೆ.

ಚುನಾವಣೆಯ ಕುರಿತ ಸಮಗ್ರ ಮಾಹಿತಿಯುಳ್ಳ ಕರ್ನಾಟಕ ಚುನಾವಣಾ ವಿಶೇಷ ಪುಟ

ಮತದಾನೋತ್ತರ ಸಮೀಕ್ಷೆಗಳು ಏನು ಹೇಳಿದ್ದವು?

ಮತ ಎಣಿಕೆ ದಿನದ ಪ್ರಮುಖಾಂಶಗಳು

ರಾಜ್ಯದ ಫಲಿತಾಂಶ ಬೇಸರ ಉಂಟುಮಾಡಿದೆ. ಸಾಕಷ್ಟು ಉತ್ತಮ ಕೆಲಸ ಮಾಡಿದ್ದ ಕಾಂಗ್ರೆಸ್ ಇಲ್ಲಿ ಗೆಲುವು ಸಾಧಿಸಬೇಕಿತ್ತು. ಆದರೆ ಜನತೆ ಅದನ್ನು ಗ್ರಹಿಸುವಲ್ಲಿ ವಿಫಲವಾಗಿದ್ದಾರೆ ಎಂದು ಮೊಯ್ಲಿ ತಿಳಿಸಿದ್ದಾರೆ.

Comments are closed.