ಬೆಂಗಳೂರು: ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ಜೆಡಿಎಸ್‍ಗೆ ಬೆಂಬಲ ನೀಡುವುದಾಗಿ ಕಾಂಗ್ರೆಸ್ ತಿಳಿಸಿದೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿ ತಮ್ಮ ನಿರ್ಧಾರವನ್ನು ಪ್ರಕಟಿಸಿದರು.
ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ, ಸರ್ಕಾರ ರಚನೆ ಮಾಡಲು ಕಾಂಗ್ರೆಸ್ ಬೆಂಬಲದ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷರಿಗೆ ನೀಡಿದ್ದಾರೆ. ಇಂದು ರಾಜ್ಯಪಾಲರಿಗೆ ಎರಡೂ ಪಕ್ಷದ ನಿಯೋಗದಿಂದ ಸರ್ಕಾರ ರಚಿಸಲು ಅನುಮತಿ ನೀಡಬೇಕೆಂದು ಮನವಿ ಸಲ್ಲಿಸಿದ್ದೇವೆ ಎಂದರು.
ಆಪರೇಷನ್ ಕಮಲದ ಬಗ್ಗೆ ಕೇಳಿದ ಪ್ರಶ್ನೆಗೆ, ಬಿ.ಎಸ್.ಯಡಿಯೂರಪ್ಪ ಯಾವ ಕಾರಣಕ್ಕೆ ಎರಡು ದಿನಗಳ ಕಾಲಾವಕಾಶ ಕೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಆಪರೇಷನ್ ಕಮಲದ ಬಗ್ಗೆ ಗಾಳಿ ಸುದ್ದಿಗಳು ಕೇಳಿ ಬರ್ತೀವಿ ಎಂದರು.
The Congress party has extended its support to the JD(S) in the interest of a better Karnataka. We hope the Governor will acknowledge our combined strength and call us to prove our majority. @INCKarnataka #KarnatakaElections2018
— Congress (@INCIndia) May 15, 2018
ಸಿದ್ದರಾಮಯ್ಯ ಮಾತನಾಡಿ, ಜೆಡಿಎಸ್ ಗೆ ಸರ್ಕಾರ ರಚನೆ ಮಾಡಲು ಕಾಂಗ್ರೆಸ್ ಸಂಪೂರ್ಣ ಬೆಂಬಲವನ್ನು ನೀಡುತ್ತಿದೆ. ಕಾಂಗ್ರೆಸ್ ತೀರ್ಮಾನವನ್ನು ಪತ್ರದ ಮೂಲಕ ರಾಜ್ಯಪಾಲರಿಗೆ ತಿಳಿಸಿದ್ದೇವೆ. ನಮ್ಮ ಪಕ್ಷದ ತೀರ್ಮಾನವನ್ನು ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡರಿಗೂ ಪತ್ರದ ಮೂಲಕ ತಿಳಿಸಲಾಗಿದೆ. ಸರ್ಕಾರ ರಚನೆ ಮಾಡಲು ಬೇಕಾದ ಬಹುಮತ ನಮ್ಮಲಿದೆ ಅಂತಾ ತಿಳಿಸಿದ್ರು.
ನಾವು ನಮ್ಮ ಪಕ್ಷದ ಎಲ್ಲ ನಾಯಕರೊಂದಿಗೆ ಬಂದಿದ್ದು, ಹಾಗೆಯೇ ಕುಮಾರಸ್ವಾಮಿ ಅವರು ತಮ್ಮ ಪಕ್ಷದ ನಿಯೋಗದಿಂದ ಬಂದು ಎರಡೂ ಪಕ್ಷಗಳಿಂದ ಒಂದೊಂದು ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದೇವೆ. ಪತ್ರದಲ್ಲಿ ನಾವು ಜೆಡಿಎಸ್‍ಗೆ ಸರ್ಕಾರ ರಚಿಸಲು ಸಂಪೂರ್ಣ ಬೆಂಬಲವನ್ನು ನೀಡಿದ್ದೇವೆ.ಕಾಂಗ್ರೆಸ್ ಮನವಿಗೆ ಜೆಡಿಎಸ್ ಸಹ ಬೆಂಬಲ ನೀಡಿದೆ ಎಂದರು.
Comments are closed.