ಕರ್ನಾಟಕ

ನಾನು ಯಾವುದೇ ಬಿಜೆಪಿ ನಾಯಕರ ಜತೆ ಮಾತುಕತೆ ನಡೆಸಿಲ್ಲ: ಕುಮಾರಸ್ವಾಮಿ ಸ್ಪಷ್ಟನೆ

Pinterest LinkedIn Tumblr


ಬೆಂಗಳೂರು:ರಾಜ್ಯ ವಿಧಾನಸಭೆಗೆ ಅತಂತ್ರ ತೀರ್ಪು ಹೊರಬಿದ್ದ ಬಳಿಕ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ರಾಜ್ಯದ ರಾಜಕೀಯ ಬೆಳವಣಿಗೆ ಕ್ಷಣ, ಕ್ಷಣಕ್ಕೂ ತಿರುವು ಪಡೆಯುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಏತನ್ಮಧ್ಯೆ ನಾನು ಯಾವುದೇ ಬಿಜೆಪಿ ನಾಯಕರ ಜತೆ ಮಾತುಕತೆ ನಡೆಸಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ಬೆಳಗ್ಗೆ ಬಿಜೆಪಿಯ ರಾಜ್ಯ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್, ಧರ್ಮೇಂದ್ರ ಪ್ರಧಾನ್, ಜೆಪಿ ನಡ್ಡಾ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮೈತ್ರಿ ಕುರಿತಂತೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಜತೆ ಮಾತನಾಡಿ ಎಂದು ಬಿಜೆಪಿ ಮುಖಂಡರಿಗೆ ಕುಮಾರಸ್ವಾಮಿ ಸಲಹೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ. ಮಾತುಕತೆ ಬಗ್ಗೆ ಕುಮಾರಸ್ವಾಮಿ ಹಾಗೂ ಜಾವ್ಡೇಕರ್ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Comments are closed.