ಕರ್ನಾಟಕ

ಬಿಜೆಪಿ ಸರ್ಕಾರ ರಚನೆಗೆ ಹಸಿರು ನಿಶಾನೆ ತೋರಿದ ರಾಜ್ಯಪಾಲ!

Pinterest LinkedIn Tumblr


ಬೆಂಗಳೂರು: ಸಾಕಷ್ಟು ಕುತೂಹಲಗಳ ಮಧ್ಯೆಯೇ ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಗ್ರೀನ್‌ ಸಿಗ್ನಲ್‌ ನೀಡಿದ್ದಾರೆ.

ಸಿಂಗಲ್‌ ಲಾರ್ಜೆಸ್ಟ್‌ ಪಾರ್ಟಿಯಾಗಿ ಹೊರಹೊಮ್ಮಿದ್ದ ಬಿಜೆಪಿಗೆ ರಾಜ್ಯಪಾಲ ವಜುಭಾಯ್‌ ವಾಲಾರಿಂದ ಗ್ರೀನ್‌ ಸಿಗ್ನಲ್‌ ದೊರಕಿದ್ದು, ನಾಳೆ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿಯಾಗಿ ಬಿ.ಎಸ್‌.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಬಿಜೆಪಿಗೆ ಸರ್ಕಾರ ರಚಿಸಲು ರಾಜ್ಯಪಾಲರಿಂದ ಆಹ್ವಾನ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳುವಂತೆ ಬೆಂಗಳೂರಿನ ಡಿಸಿಪಿಗಳಿಗೆ ಡಿಜಿಪಿ ಕಚೇರಿಯಿಂದ ಪತ್ರ ಬರೆಯಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

Comments are closed.