ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ದೇವೇಗೌಡರು ತಿರುಪತಿಗೆ ತೆರಳುವುದಕ್ಕೂ ಮುನ್ನ ರಾಹುಲ್ ಅವರು ದೂರವಾಣಿ ಮೂಲಕ ಸಂಪರ್ಕಿಸಿದ್ದು, ಒಗ್ಗಟ್ಟು ಪ್ರದರ್ಶನದ ಬಗ್ಗೆ ಇಬ್ಬರೂ ಸಮಾಲೋಚನೆ ನಡೆಸಿದ್ದಾರೆ. ಬಿಜೆಪಿಯನ್ನು ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನಿಸಿದರ ವಿರುದ್ಧ ರಾಷ್ಟ್ರಮಟ್ಟದಲ್ಲಿ ಕಾನೂನು ಹೋರಾಟ ವನ್ನು ನಾವು ನೋಡಿಕೊಳ್ಳುತ್ತೇವೆ. ರಾಜ್ಯದಲ್ಲಿ ನೀವು ಜವಾಬ್ದಾರಿ ತೆಗೆದುಕೊಳ್ಳಿ ಎಂದು ಮನವಿ ಮಾಡಿದರು ಎನ್ನಲಾಗಿದೆ.
ತಿರುಪತಿಗೆ ತೆರಳಿದ ದೇವೇಗೌಡ: ಶುಕ್ರವಾರ ದೇವೇಗೌಡರ ಹುಟ್ಟುಹಬ್ಬವಿದೆ. ಪ್ರತಿ ವರ್ಷ ತಮ್ಮ ಹುಟ್ಟುಹಬ್ಬದ ದಿನ ತಿರುಪತಿಗೆ ಹೋಗುವ ಸಂಪ್ರದಾಯವನ್ನು ರೂಢಿಸಿಕೊಂಡಿದ್ದು, ಅದರಂತೆ ಗುರುವಾರ ತಿರುಪತಿಗೆ ತೆರಳಿದ್ದಾರೆ.
Comments are closed.