ಕರ್ನಾಟಕ

ನಾಳೆ ಶೇ.100ರಷ್ಟು ಬಹುಮತ ನಾವು ಸಾಬೀತುಪಡಿಸುತ್ತೇವೆ: ಸಿಎಂ ಬಿ.ಎಸ್. ಯಡಿಯೂರಪ್ಪ

Pinterest LinkedIn Tumblr

ಬೆಂಗಳೂರು: ವಿಶ್ವಾಸಮತಯಾಚನೆ ವೇಳೆ ಶೇ.100ರಷ್ಟು ಬಹುಮತ ಸಾಬೀತುಪಡಿಸುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

‘ಪ್ರಮಾಣ ವಚನ ಸಮಾರಂಭಕ್ಕೆ ಅವಕಾಶ ನೀಡಕೂಡದು’ ಎಂದು ಕೋರಿ ಕಾಂಗ್ರೆಸ್‌–ಜೆಡಿಎಸ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಶುಕ್ರವಾರ ಬೆಳಿಗ್ಗೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌ ನಾಳೆ(ಶನಿವಾರ) ಸಂಜೆ 4ಕ್ಕೆ ಬಹುಮತ ಸಾಬೀತುಪಡಿಸುವಂತೆ ಆದೇಶ ನೀಡಿತು.

ಸುಪ್ರೀಂ ಕೋರ್ಟ್ ಆದೇಶ ಹೊರ ಬಿದ್ದ ಕೆಲ ಸಮಯದಲ್ಲೇ ಸುದ್ದಿಗಾರರೊಟ್ಟಿಗೆ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು, ಸುಪ್ರೀಂ ಕೋರ್ಟ್‌ನ ಆದೇಶವನ್ನು ಪಾಲನೆ ಮಾಡುತ್ತೇವೆ. ನಾಳೆಯೇ ವಿಶ್ವಾಸ ಮತ ಸಾಬೀತುಪಡಿಸುತ್ತೇವೆ ಎಂದು ತಿಳಿಸಿದರು.

ಈ ಸಂಬಂಧ ನಾಳೆ ವಿಧಾನಸಭೆ ಅಧಿವೇಶನ ಕರೆಯುವ ಬಗ್ಗೆ ಮುಖ್ಯ ಕಾರ್ಯದರ್ಶಿ ಜತೆ ಚರ್ಚಿಸುತ್ತೇನೆ. 100ಕ್ಕೆ 100ರಷ್ಟು ಬಹುಮತ ಸಾಬೀತುಪಡಿಸುತ್ತೇವೆ ಎಂದು ಯಡಿಯೂರಪ್ಪ ಅವರು ವಿಶ್ವಾಸದಿಂದಲೇ ಹೇಳಿದರು.

ಆದರೆ, ಹೇಗೆ ಬಹುಮತ ತೋರಿಸುತ್ತೀರಿ? ಯಾರೆಲ್ಲಾ ನಿಮ್ಮ ಜತೆಗಿದ್ದಾರೆ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆ, ಸಿಎಂ ಯಾವುದೇ ಪ್ರತಿಕ್ರಿಯೆ ನೀಡದೆ, ಕಾದು ನೋಡಿ ಎಂದಷ್ಟೇ ಹೇಳಿ ತೆರಳಿದರು.

Comments are closed.