
ಬೆಂಗಳೂರು: ರಾಜ್ಯದಲ್ಲಿ ಸರ್ಕಾರವನ್ನು ಉಳಿಸಿಕೊಳ್ಳಲು ಸರ್ವ ಪ್ರಯತ್ನ ನಡೆಸುತ್ತಿರುವ ಬಿಜೆಪಿ ಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಸೆಳೆಯಲು ಮೆಗಾ ಪ್ಲ್ಯಾನ್ ರೂಪಿಸುತ್ತಿದೆ.
ಪ್ರಮುಖವಾಗಿ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗದ ಕಾಂಗ್ರೆಸ್ನ ಮತ್ತು ಜೆಡಿಎಸ್ನ ಲಿಂಗಾಯತ ಶಾಸಕರನ್ನು ಸೆಳೆಯಲು ಬಿಜೆಪಿ ನಾಯಕರು ಯೋಜನೆ ರೂಪಿಸುತ್ತಿದ್ದಾರೆ. ಇದರ ಭಾಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಆಪ್ತ ಶಾಸಕರಿಗೆ ಮತ್ತು ಮುಖಂಡರಿಗೆ 10 ಶಾಸಕರ ಪಟ್ಟಿ ನೀಡಿದ್ದು, ಅವರ ಮನವೊಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.
ಗುರುವಾರ ರಾತ್ರಿ ಯಡಿಯೂರಪ್ಪ ಅವರು ಖಾಸಗಿ ಹೋಟೆಲ್ನಲ್ಲಿ ಉಳಿದುಕೊಂಡು ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಿದ್ದಾರೆ. ಪಕ್ಷಕ್ಕೆ ಬರುವ ಶಾಸಕರಿಗೆ ಸಚಿವ ಸ್ಥಾನ ನೀಡುವ ಆಮಿಷ ತೋರಿಸಲಾಗುತ್ತಿದೆ. ಇದನ್ನು ಹೊರತುಪಡಿಸಿ ಪ್ಲ್ಯಾನ್ -ಬಿಯನ್ನೂ ಸಹ ಬಿಜೆಪಿ ಸಿದ್ಧಪಡಿಸಿದ್ದು, ಬಹುಮತ ಸಾಬೀತು ಪಡಿಸಲು ರಣತಂತ್ರ ಹೆಣೆಯುತ್ತಿದೆ ಎಂದು ತಿಳಿದು ಬಂದಿದೆ.
Comments are closed.