
ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಹುಮತ ಸಾಬೀತುಪಡಿಸುವ ಮುನ್ನವೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಹೊಸ ಸರ್ಕಾರ ರಚಿಸುವ ಉತ್ಸಾಹದಲ್ಲಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ರಾಜ್ಯಪಾಲರ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ.
ಯಡಿಯೂರಪ್ಪ ರಾಜಿನಾಮೆ ನೀಡಿದ್ದಾರೆ. ನೀವು ಯಾವಾಗ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೀರಿ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಎಚ್ ಡಿಕೆ, ನಾನು ರಾಜ್ಯಪಾಲರ ಆಹ್ವಾನಕ್ಕಾಗಿ ಕಾಯುತ್ತಿದ್ದೇನೆ ಎಂದರು.
ಕುಮಾರಸ್ವಾಮಿ ಅವರು ಈಗಾಗಲೇ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದು, ರಾಜ್ಯಪಾಲ ವಜುಭಾಯಿ ವಾಲಾ ಅವರು ಯಡಿಯೂರಪ್ಪ ಅವರ ರಾಜಿನಾಮೆ ಅಂಗೀಕರಿಸಿದ ನಂತರ ಕುಮಾರಸ್ವಾಮಿ ಅವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡುವ ಸಾಧ್ಯತೆ ಇದೆ.
Comments are closed.