ಬೆಂಗಳೂರು: ಬಿಜೆಪಿ ನಾಯಕರು ನನ್ನನ್ನು ಸಂಪರ್ಕಿಸಿ ನನಗೆ ಮಂತ್ರಿ ಸ್ಥಾನ ನೀಡುವ ಆಮಿಷವೊಡ್ಡಿದ್ದು ನಿಜ ಎಂದು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಸರ್ಕಾರ ರಚನೆಗೆ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿ ಎಸ್ ಯಡಿಯೂರಪ್ಪನವರು ಕರೆ ಮಾಡಿ ಮಂತ್ರಿ ಸ್ಥಾನ ನೀಡುವ ಆಮಿಷವೊಡ್ಡಿದ್ದರು ಎನ್ನುವ ಆರೋಪಗಳಿಗೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಅವರು, ಈ ಸುದ್ದಿ ಸತ್ಯವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ಶಿವರಾಮ್ ಹೆಬ್ಬಾರ್ ಅವರೊಂದಿಗೆ ಬಿಜೆಪಿ ನಾಯಕರು ಮಾತನಾಡಿ ಹಣದ ಆಮಿಷವೊಡ್ಡಿದ್ದರು ಎಂಬ ಆಡಿಯೊ ಟೇಪ್ ಬಿಡುಗಡೆ ಕುರಿತು ಪ್ರತಿಕ್ರಿಯಿಸಿ ಹೆಬ್ಬಾರ್ ಬಗೆಗಿನ ವಿಚಾರ ನನಗೆ ಗೊತ್ತಿಲ್ಲ. ನನ್ನ ಬಗ್ಗೆ ಮಾತ್ರ ನಾನು ಹೇಳಬಲ್ಲೆ ಎಂದರು.
ಯಡಿಯೂರಪ್ಪ, ಶ್ರೀರಾಮುಲು ಮತ್ತು ಮುರಳೀಧರ್ ರಾವ್ ನನ್ನ ಜೊತೆ ಮಾತನಾಡಿ ನನ್ನನ್ನು ಬಿಜೆಪಿಗೆ ಆಹ್ವಾನಿಸಿದ್ದು, ಮಂತ್ರಿ ಸ್ಥಾನ ನೀಡುವುದಾಗಿ ಹೇಳಿದ್ದು ನಿಜ ಎಂದು ಹೇಳಿದ್ದಾರೆ.
Comments are closed.