ಕರ್ನಾಟಕ

ನಕಲಿ ಸಿಡಿ ಪ್ರಕರಣ ಸಂಬಂಧ ತನಿಖೆಗೆ ಆಗ್ರಹಿಸಿದ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ

Pinterest LinkedIn Tumblr

ಮೈಸೂರು: ಅಧಿಕಾರದ ಆಸೆಗಾಗಿ ಜೆಡಿಎಸ್ ಜೊತೆಗೆ ಕೈಜೋಡಿಸಿರುವ ಕಾಂಗ್ರೆಸ್, ನಕಲಿ ಸಿಡಿಗಳನ್ನು ಸೃಷ್ಟಿಸಿ ಬಿಜೆಪಿ ವಿರುದ್ಧ ಸುಳ್ಳು ಆರೋಪ ಮಾಡಿದ್ದು, ಪ್ರಕರಣ ಸಂಬಂಧ ತನಿಖೆಗೆ ನಡೆಸುವಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಯವರು ಸೋಮವಾರ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಕಾಂಗ್ರೆಸ್ ಎಂಎಲ್’ಸಿ ವಿ.ಎಸ್ ಉಗ್ರಪ್ಪ ಅವರು ಬಿಡುಗಡೆಗೊಳಿಸಿದ್ದ ಬಿಜೆಪಿ ವಿರುದ್ಧದ ಬಿಡುಗಡೆಗೊಳಿಸಿದ್ದ ನಕಲಿ ಸಿಡಿಗಳ ಕುರಿತು ಸರ್ಕಾರ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

ವಿಶ್ವಾಸಮತಯಾಚನೆ ವೇಳೆ ಬಿಜೆಪಿ ಕುದುರೆ ವ್ಯಾಪಾರ ನಡೆಸಲು ಯತ್ನ ನಡೆಸಿತ್ತು ಎಂಬ ಆರೋಪವನ್ನು ಇದೇ ವೇಳೆ ತಳ್ಳಿ ಹಾಕಿರುವ ಅವರು, ಇತ್ತೀಚೆಗಷ್ಟೇ ಸ್ವತಃ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಅವರೇ ಸ್ಪಷ್ಟನೆ ನೀಡಿದ್ದರು. ಬಿಜೆಪಿ ಶಾಸಕರನ್ನು ಖರೀದಸಲು ಯತ್ನ ನಡೆಸಿಲ್ಲ ಎಂದು ಹೇಳಿದ್ದರು. ಆರೋಪಗಳು ಸುಳ್ಳು ಎಂಬುದು ಸಾಬೀತುಪಡಿಸಲು ಇದೇ ಸಾಕ್ಷಿ ಎಂದು ಹೇಳಿದ್ದಾರೆ.

ಜೆಡಿಎಸ್ ಕಾಂಗ್ರೆಸ್ ಮೈತ್ರಿ ಸರ್ಕಾರ ಶೀಘ್ರದಲ್ಲಿಯೇ ಉರುಳಿ ಬೀಳಲಿದೆ. ಜನಾದೇಶ ಬಿಜೆಪಿ ಪರವಾಗಿತ್ತು. ಜೆಡಿಎಸ್ ಕಾಂಗ್ರೆಸ್ ಪಕ್ಷಗಳ ಕುತಂತ್ರದ ಬಗ್ಗೆ ಜನರಿಗೆ ಗೊತ್ತಿದೆ ಎಂದು ತಿಳಿಸಿದ್ದಾರೆ.

ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭಯರ್ಥಿ ವಿಜುಗೌಡ ಪಾಟೀಲ್ ಅವರು, ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಸರ್ಕಾರಿ ಅಧಿಕಾರಿಗಳನ್ನು ಬಳಸಿಕೊಂಡು ಬಬಲೇಶ್ವರ ಕ್ಷೇತ್ರದ ವಿವಿ ಪ್ಯಾಟ್ ಯಂತ್ರಗಳನ್ನು ದುರುಪಯೋಗ ಮಾಡಿಕೊಂಡು ಗೆಲವು ಸಾಧಿಸಿದ್ದಾರೆಂದು ಇದೇ ವೇಳೆ ಆರೋಪ ಮಾಡಿದ ಶೋಭಾ ಅವರು, ಸಾಕಷ್ಟು ಭದ್ರತೆ ನೀಡಿ ಇರಿಸಲಾಗಿದ್ದ ವಿವಿ ಪ್ಯಾಟ್ ಯಂತ್ರಗಳು ಖಾಸಗಿ ವ್ಯಕ್ತಿಗೆ ಸೇರಿದೆ ಗೋದಾಮಿನಲ್ಲಿ ಹೇಗೆ ಲಭ್ಯವಾಯಿತು ಎಂದು ಪ್ರಶ್ನೆ ಮಾಡಿದ್ದಾರೆ.

Comments are closed.