ಕರ್ನಾಟಕ

ಶಕ್ತಿಸೌಧ ವಿಧಾನಸೌಧದ ಎದರು ಕುಮಾರಸ್ವಾಮಿ ಪ್ರಮಾಣವಚಕ್ಕೆ ಕ್ಷಣಗಣನೆ

Pinterest LinkedIn Tumblr

ಬೆಂಗಳೂರು; ವಿಧಾನಸಬಾ ಚುನಾವಣೆಯಲ್ಲಿ ಅತೀದೊಡ್ಡ ಪಕ್ಷವಾಗಿ ಹೊರಹೊಮ್ಮಿ ಸರ್ಕಾರ ರಚಿಸಿದರಹೂ ಬಹುಮತ ಸಾಬೀತು ಪಡಿಸುವಲ್ಲಿ ವಿಫಲರಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡಿದ ಕೇವಲ ನಾಲ್ಕೇ ದಿನದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರುತ್ತಿದೆ.

ಕರ್ನಾಟಕದ 24ನೇ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರು ಬುಧವಾರ ಸಂಜೆ 4.30ಕ್ಕೆ ಬೆಂಗಳೂರಿನ ಶಕ್ತಿಸೌಧ ವಿಧಾನಸೌಧದ ಎದರು ಪ್ರಮಾಣವಚ ಸ್ವೀಕರಿಸುತ್ತಿದ್ದಾರೆ. ಇದರೊಂದಿಗೆ 10 ವರ್ಷಗಳ ಬಳಿಕ ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಮರಳುತ್ತಿದೆ.

ಕುಮಾರಸ್ವಾಮಿಯವರ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರೂ ಕೂಡ ಸಂಪುಟ ಸದಸ್ಯರಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಉಪಮುಖ್ಯಮಂತ್ರಿಯಾಗುವ ಅವರ ಬಹುದಿನಗಳ ಕನಸು ಇಂದು ನನಸಾಗಲಿದೆ.

ಕುಮಾರಸ್ವಾಮಿ, ಪರಮೇಶ್ವರ್ ಅವರನ್ನು ಹೊರತುಪಡಿಸಿ ಉಬಯ ಪಕ್ಷಗಳಿಂದ ಬೇರಾರೂ ಪ್ರಮಾಣವಚನ ಸ್ವೀಕರಿಸುತ್ತಿಲ್ಲ. ವಿಶ್ವಾಸಮತಯಾಚನೆ ನಂತರ ಸಂಪುಟ ವಿಸ್ತರಣೆ ಕೈಗೊಳ್ಳಲು ನಿರ್ಧಾರ ಕೈಗೊಳ್ಳಲಾಗಿದ್ದು, ಬಹುತೇಕ ಮುಂದಿನ ವಾರದ ವೇಳೆಗೆ ಕುಮಾರಸ್ವಾಮಿ ಅವರ ಸಂಪುಟ ಪೂರ್ಣ ಪ್ರಮಾಣದಲ್ಲಿ ಜವಾಬ್ದಾರಿಗಳನ್ನು ನಿಭಾಯಿಸಲಿದೆ.

ಇಂದು ಸಂಜೆ 4.30ಕ್ಕೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆಯುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಕುಮಾರಸ್ವಾಮಿ ಹಾಗೂ ಪರಮೇಶ್ವರ್ ಅವರಿಗೆ ರಾಜ್ಯಪಾಲ ವಿ.ಆರ್.ವಾಲಾ ಅವರು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾದ ಬಳಿಕ ಜೆಡಿಎಸ್’ಗೆ ಮುಖ್ಯಮಂತ್ರಿ ಹುದ್ದೆ ಬಹುತೇಕ ಖಚಿತವಾಗಿತ್ತು. ಇದರಂತೆ ಕಂಠೀರವ ಕ್ರೀಡಾಂಗಣದಲ್ಲಿ ಲಕ್ಷಾಂತರ ಜನಸ್ತೋಮದ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಸುವ ಉದ್ದೇಶ ಹೊಂದಲಾಗಿತ್ತು. ಆದರೆ, ನಾನಾ ಕಾರಣಗಳಿಂದಾಗಿ ಕಂಠೀರವ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸುವುದನ್ನು ಸ್ಥಗಿತಗೊಳಿಸಿ, ಅರಮನೆ ಮೈದಾನದಲ್ಲಿ ನಡೆಸುವ ಬಗ್ಗೆ ಆಲೋಚನೆಗಳು ನಡೆದಿತ್ತು. ಆದರೆ, ಆ ಸ್ಥಳವು ಸರಿಕಾಣದ ಹಿನ್ನಲೆಯಲ್ಲಿ ಅಂತಿಮವಾಗಿ ವಿಧಾನಸೌಧದ ಮುಂದೆಯೇ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಸಲು ಜೆಡಿಎಸ್-ಕಾಂಗ್ರೆಸ್ ತೀರ್ಮಾನಿಸಿತ್ತು.

Comments are closed.