ಕರ್ನಾಟಕ

ಉಪಮುಖ್ಯಮಂತ್ರಿ ಸ್ಥಾನ ಬೇಕೆ ಬೇಕು ಎಂದು ಪಟ್ಟು ಹಿಡಿದ ಡಿಕೆಶಿ: ಮನವೊಲಿಕೆಗೆ ಕಸರತ್ತು!

Pinterest LinkedIn Tumblr

ಬೆಂಗಳೂರು: ಕೆಲಸ ಮಾಡಲು ಮಾತ್ರ ನಾವು ಬೇಕು, ಅಧಿಕಾರ ಬೇರೆಯವರು ಅನುಭವಿಸಬೇಕಾ? ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಡಿಕೆ ಶಿವಕುಮಾರ್ ಸಹೋದರರು ಆಕ್ರೋಶವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ ಇಬ್ಬರ ಮನವೊಲಿಕೆಗೆ ಕಸರತ್ತು ನಡೆಸಲಾಗುತ್ತಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಹಿಲ್ಟನ್ ನ ಹೋಟೆಲ್ ನಿಂದ ಡಿಕೆಶಿ ಸಹೋದರರು ಜಾಗ ಖಾಲಿ ಮಾಡಿದ್ದಾರೆನ್ನಲಾಗಿದೆ. ಅಲ್ಲದೇ ಡಿಕೆಶಿ ಬ್ರದರ್ಸ್ ಯಾರ ದೂರವಾಣಿ ಕರೆಯನ್ನೂ ಸ್ವೀಕರಿಸುತ್ತಿಲ್ಲ ಎಂದು ವರದಿ ವಿವರಿಸಿದೆ.

ಪರಮೇಶ್ವರ್ ಹಾಗೂ ಕೆಸಿ ವೇಣುಗೋಪಾಲ್ ಅವರು ಡಿಕೆ ಶಿವಕುಮಾರ್ ಅವರನ್ನು ಸಂಪರ್ಕಿಸಲು ಯತ್ನಿಸುತ್ತಿದ್ದರೂ ಕೂಡಾ ಅದು ಸಾಧ್ಯವಾಗಿಲ್ಲ ಎಂಬ ಮಾಹಿತಿ ಬಂದಿದೆ. ತಮಗೆ ಉಪಮುಖ್ಯಮಂತ್ರಿ ಹುದ್ದೆ ಬೇಕೆ, ಬೇಕು ಎಂದು ಡಿಕೆಶಿ ಪಟ್ಟು ಹಿಡಿದಿದ್ದಾರೆನ್ನಲಾಗಿದೆ.

ಬುಧವಾರ ಸಂಜೆ ವಿಧಾಸನಸೌಧದ ಮುಂಭಾಗದಲ್ಲಿ ಎಚ್ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಹಾಗೂ ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Comments are closed.