ಕರ್ನಾಟಕ

ಕೆ.ಪಿ.ಸಿ.ಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ರಾಜೀನಾಮೆ!

Pinterest LinkedIn Tumblr


ಬೆಂಗಳೂರು: ನಿನ್ನೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚ ಸ್ವೀಕರಿಸಿದ ಕೆ.ಪಿ.ಸಿ.ಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ತಮ್ಮ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇಂದು ಬೆಳಿಗ್ಗೆ ವಿಧಾನ ಪರಿಷತ್ ಸಭಾಪತಿ ಶಂಕರ ಮೂರ್ತಿಯವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕೊರಟಗೆರೆಯಿಂದ ಶಾಸಕನಾಗಿ ಆಯ್ಕೆಯಾದ ಕಾರಣ ತಮ್ಮ ಸ್ಥಾನಕ್ಕೆ ಪರಮೇಶ್ವರ್ ರಾಜೀನಾಮೆ ನೀಡಿದ್ದಾರೆ. ಸಭಾಪತಿಯವರನ್ನು ನೇರವಾಗಿ ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಜತೆಗೆ ಕೆಪಿಸಿಸಿ ಕಾರ್ಯದರ್ಶಿ ಎಸ್ .ಆರ್ ಪಾಟೀಲ್ ಉಪಸ್ಥಿತರಿದ್ದರು.

2013 ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಿಂದ ಸೋಲುಂಡ ಬಳಿಕ, ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ ರಾಜ್ಯದ ಗೃಹ ಸಚಿವಾರಿಗೂ ಕಾರ್ಯ ನಿರ್ವಹಿಸಿದ್ದರು. ಪ್ರಸ್ತುತ ಕೈ-ದಳ ಸಮ್ಮಿಶ್ರ ಸರಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದಾರೆ.

Comments are closed.