ಕರ್ನಾಟಕ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಭದ್ರತಾ ಲೋಪ; ಪೊಲೀಸರೊಂದಿಗೆ ಕುಮಾರಸ್ವಾಮಿ ಚರ್ಚೆ

Pinterest LinkedIn Tumblr


ಬೆಂಗಳೂರು: ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸಿದ್ದ ಪಶ್ಚಿಮ ಬಂಗಾಲ ಸಿಎಂ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಭದ್ರತಾ ಲೋಪವಾಗಿದೆ.

ಕಾರ್ಯಕ್ರಮಕ್ಕೆ ಮುನ್ನ ಸುರಿದ ಭಾರೀ ಮಳೆಯಿಂದಾಗಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು, ಈ ವೇಳೆ ಆಗಮಿಸಿದ ಮಮತಾ ಬ್ಯಾನರ್ಜಿ ಅವರು ದಾರಿ ಕಾಣದೆ ಚಾಲುಕ್ಯ ಸರ್ಕಲ್‌ನಿಂದ ವಿಧಾನಸೌಧದ ವರೆಗೆ ನಡೆದುಕೊಂಡೇ ಬಂದಿದ್ದರು.ಈ ಬಗ್ಗೆ ಕುಮಾರಸ್ವಾಮಿ ಅವರ ಬಳಿಯೂ ಹೇಳಿಕೊಂಡಿದ್ದರು.

ರಾಜ್ಯ ಪೊಲೀಸ್‌ ಮಹಾ ನಿರ್ದೇಶಕಿ ನೀಲಮಣಿ ಎನ್‌.ರಾಜು, ಗುಪ್ತಚರ ವಿಭಾಗದ ಎಡಿಜಿಪಿ ಅಜಯ್‌ಕುಮಾರ್‌ ಅವರೊಂದಿಗೆ ಸಿಎಂ ಕುಮಾರಸ್ವಾಮಿ ಅವರು ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಎಚ್‌ಡಿಕೆ ಪೊಲೀಸರೊಂದಿಗೆ ಭದ್ರತಾ ಲೋಪದ ಕುರಿತು ಚರ್ಚೆ ಮಾಡಿ ಎಚ್ಚರಿಕೆ ನೀಡಿದ್ದೇನೆ ಎಂದಿದ್ದಾರೆ.

Comments are closed.