ಕರ್ನಾಟಕ

ವಿಧಾನಸಭೆ ಸಭಾಧ್ಯಕ್ಷರಾಗಿ ಕೆ.ಆರ್.ರಮೇಶ್‌ ಕುಮಾರ್ ಅವಿರೋಧ ಆಯ್ಕೆ; ಕಣದಿಂದ ಹಿಂದೆ ಸರಿದ ಸುರೇಶ್ ಕುಮಾರ್

Pinterest LinkedIn Tumblr

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ರಮೇಶ್ ಕುಮಾರ್ ಅವರು ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಯ್ಕೆ ವಿಚಾರ ಕೊನೆಗೂ ಮುಕ್ತಾಯಗೊಂಡಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಸ್ಪರ್ಧೆ ಒಡ್ಡಿದ್ದ ಬಿಜೆಪಿಯ ಸುರೇಶ್ ಕುಮಾರ್ ಅವರು ಕಣದಿಂದ ಹಿಂದಕ್ಕೆ ಸರಿದಿದ್ದಾರೆ. ಆ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಜಂಟಿ ಅಭ್ಯರ್ಥಿ ಸುರೇಶ್ ಕುಮಾರ್ ಅವರು ಸ್ಪೀಕರ್ ಆಗಿ ಅವಿರೋಧವಾಗಿ ಆಯ್ಕೆಯಾದಂತಾಗಿದೆ.

ಈ ಬಗ್ಗೆ ಬಿಜೆಪಿ ಅಭ್ಯರ್ಥಿ ಸುರೇಶ್ ಕುಮಾರ್ ಅವರು ಟ್ವೀಟ್ ಮಾಡಿದ್ದು, ಪಕ್ಷಗ ನಿರ್ಧಾರದಂತೆ ತಾವು ಕಣದಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ಪ್ರಕಟಿಸಿದ್ದಾರೆ. ಅಲ್ಲದೆ ಸಂಸದೀಯ ಸಂಪ್ರದಾಯಕ್ಕೆ ಅನುಗುಣವಾಗಿ ಸಭಾಧ್ಯಕ್ಷರು ಸರ್ವಾನುಮತದಿಂದ ಆಯ್ಕೆಯಾಗುವುದು ಸೂಕ್ತವೆಂದು ಅಭಿಪ್ರಾಯ ಪಟ್ಟ ಕಾರಣ ನಾಮಪತ್ರ ವಾಪಸ್ಸು ಪಡೆಯುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಆ ಮೂಲಕ ರಮೇಶ್ ಕುಮಾರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಲಿದ್ದ ಅವರ ನೇತೃತ್ವದಲ್ಲೇ ವಿಶ್ವಾಸಮತಯಾಚನೆ ಪ್ರಕ್ರಿಯೆ ಕೂಡ ನಡೆಯಲಿದೆ ಎನ್ನಲಾಗಿದೆ.

Comments are closed.