ಕರ್ನಾಟಕ

ಕೇಂದ್ರ ಸರ್ಕಾರ ವೀರಶೈವ-ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡದೆ ಇದ್ದರೆ ಸುಪ್ರೀಂ ಮೊರೆ ಹೋಗುತ್ತೇವೆ: ಮಾತೆ ಮಹಾದೇವಿ

Pinterest LinkedIn Tumblr

ಚಿತ್ರದುರ್ಗ: ಕೇಂದ್ರ ಸರ್ಕಾರ ವೀರಶೈವ-ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡದೆ ಇದ್ದರೆ ತಾವು ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ಬಸಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಅವರು ಭಾನುವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾತೆ ಮಹಾದೇವಿ, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟ ಮುಂದುವರಿಯುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ನಂತರ ದೆಹಲಿಯಲ್ಲಿ ಬೃಹತ್ ಜಾಥಾ ನಡೆಸುತ್ತೇವೆ ಎಂದರು.

ಈ ಮೊದಲು ಪ್ರತ್ಯೇಕ ಧರ್ಮ ಹೋರಾಟಕ್ಕೆ ಬಿಜೆಪಿ ವಿರೋಧಿಸಿತ್ತು. ಆದರೆ ಈಗ ಜನರ ಬೇಡಿಕೆ ಹೆಚ್ಚಾಗಿರುವ ಕಾರಣ ಬೇಡಿಕೆಗೆ ಸ್ಪಂದಿಸಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಪ್ರತ್ಯೇಕ ಧರ್ಮಕ್ಕೆ ಮಾನ್ಯತೆ ಸಿಗುವ ವಿಶ್ವಾಸವಿದೆ ಎಂದರು.

ಇದೇ ವೇಳೆ, ಜೆಡಿಎಸ್- ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವ ಅಗತ್ಯವಿದೆ. ಶಾಮನೂರು ಶಿವಶಂಕರಪ್ಪ ಅವರಿಗೆ ವಯಸ್ಸಾಗಿದೆ. ಮಧ್ಯ ವಯಸ್ಕರಾಗಿರುವ ಎಂ.ಬಿ.ಪಾಟೀಲ ಈ ಸ್ಥಾನಕ್ಕೆ ಸೂಕ್ತವಾಗಿದ್ದಾರೆ ಎಂದು ಮಾತೆ ಮಹಾದೇವಿ ಹೇಳಿದ್ದಾರೆ.

Comments are closed.