ಕರ್ನಾಟಕ

ಬೆಂಗಳೂರು: ಕನ್ನಯ್ಯ ಲಾಲ್ & ಕಂಪನಿ ಮಾಲೀಕ ಉದ್ಯಮಿ ಮೇಲೆ ಗುಂಡಿನ ದಾಳಿ

Pinterest LinkedIn Tumblr


ಬೆಂಗಳೂರು: ಉದ್ಯಮಿಯೊಬ್ಬರ ಕಚೇರಿ ನುಗ್ಗಿ ಗುಂಡಿನ ದಾಳಿ ನಡೆಸಿದ ಘಟನೆ ನಗರದ ಕೋರಮಂಗಲದ ಸಮೀಪ ನಡೆದಿದೆ.

ಕನ್ನಯ್ಯ ಲಾಲ್ & ಕಂಪನಿ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಅದೃಷ್ವವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣ ಪುಟ್ಟ ಗಾಯಗಳಾಗಿರುವ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಚೇರಿಗೆ ನುಗ್ಗಿದ ಮೂವರು ದುಷ್ಕರ್ಮಿಗಳು ಸಂಸ್ಥೆ ಮಾಲಿಕರ ಮೇಲೆ ಒಮ್ಮಿಂದೊಮ್ಮೆಲೇ ಗುಂಡಿನ ದಾಳಿ ಮಾಡಲು ಆರಂಭಿಸಿದ್ದಾರೆ. ಗುಂಡಿನ ದಾಳಿಯಿಂದ ಅವರು ಕೂದಲೆಳೆಯಲ್ಲಿ ಪಾರಾಗಿದ್ದಾರೆ. ಗುಂಡಿನ ಶಬ್ಧ ಕೇಳಿ, ಸುತ್ತಮುತ್ತಲ ಜನ ಗಾಬರಿಗೊಂಡಿದ್ದಾರೆ. ಈ ವೇಳೆ ದುಷ್ಕರ್ಮಿಗಳೂ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ನಿರ್ದಿಷ್ಟ ಕಾರಣಗಳು ತಿಳಿದು ಬಂದಿಲ್ಲ. ಈ ಸಂಬಂಧ ಕೋರಮಂಗಲ ಪೊಲೀಸರು ಸ್ಥಳಕ್ಕೆ ಭೇಟಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ಅಗ್ನೇಯ ವಿಭಾಗದ ಡಿಸಿಪಿ ಬೋರಲಿಂಗಯ್ಯ ಭೇಟಿ ನೀಡಿದ್ದು, ತನಿಖೆ ನಡೆಸುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

Comments are closed.