
ಬೆಂಗಳೂರು: ಮೈತ್ರಿ ಸರ್ಕಾರದ ಸಚಿವ ಸಂಪುಟ ಕರಸತ್ತು ತೀವ್ರವಾಗಿರುವ ಬೆನ್ನಲ್ಲೇ ಕಾಂಗ್ರೆಸ್ನ ಹಿರಿಯ ನಾಯಕರು ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಯೋಜನೆ ರೂಪಿಸಿದ್ದರು. ಆದರೆ ಅವರ ದೆಹಲಿ ಭೇಟಿ ದಿಢೀರ್ ರದ್ದಾಗಿದೆ.
ಇಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಭೇಟಿಗೆ ಅವಕಾಶ ನೀಡುವಂತೆ ಕೋರಿದ್ದರು.
ಆದರೆ ಕಾಂಗ್ರೆಸ್ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ನೀವು ದೆಹಲಿಗೆ ಬರುವುದು ಬೇಡ ಎಂದು ಸಂದೇಶ ರವಾನಿಸಿದ್ದಾರೆ. ಜತೆಗೆ ಇಂದು ರಾಹುಲ್ ಜತೆ ನಾವೇ ಮಾತನಾಡಿ ನಿಮಗೆ ಮಾಹಿತಿ ನೀಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
ದೆಹಲಿಗೆ ಕೈ ಹಿರಿಯ ನಾಯಕರು ಬರುವುದರಿಂದ ಸಚಿವ ಸ್ಥಾನದ ಇತರ ಆಕಾಂಕ್ಷಿಗಳೂ ಸಹ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ನೀವು ದೆಹಲಿಗೆ ಬರುವುದು ಬೇಡ ಎಂದು ಹೈಕಮಾಂಡ್ ಸ್ಪಷ್ಟ ಸಂದೇಶ ನೀಡಿದೆ ಎಂದು ತಿಳಿದು ಬಂದಿದೆ.
Comments are closed.