ಕರ್ನಾಟಕ

ಜೂನ್ 11ರಂದು ಜಯನಗರ ಚುನಾವಣೆ: ಕಣದಿಂದ ಹಿಂದೆ ಸರಿದ ಜೆಡಿಎಸ್‌; ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ ಬೆಂಬಲ

Pinterest LinkedIn Tumblr

ಬೆಂಗಳೂರು: ಜೂನ್ 11ರಂದು ನಡೆಯಲಿರುವ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದಿಂದ ಜೆಡಿಎಸ್ ಅಭ್ಯರ್ಥಿ ಕಾಳೇಗೌಡ ಅವರು ಹಿಂದೆ ಸರಿದಿದ್ದು, ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಗೆ ಬೆಂಬಲ ಸೂಚಿಸಿದ್ದಾರೆ.

ಜಯನಗರದ ಮಾಜಿ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್ 11ರಂದು ಮತದಾನ ನಡೆಯುತ್ತಿದ್ದು, ಜೂನ್ 13ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಕಾಂಗ್ರೆಸ್‌ ನಿಂದ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯ ರೆಡ್ಡಿ, ಬಿಜೆಪಿಯಿಂದ ಬಿ.ಎನ್‌. ವಿಜಯಕುಮಾರ್ ಅವರ ತಮ್ಮ ಬಿ.ಎನ್‌. ಪ್ರಹ್ಲಾದ್‌ (ಬಾಬು) ಹಾಗೂ ಪಕ್ಷೇತರರಾಗಿ ‘ಲಂಚ ಮುಕ್ತ ಕರ್ನಾಟಕ’ ಸಂಘಟನೆ ಮುಖಂಡ ರವಿಕೃಷ್ಣಾ ರೆಡ್ಡಿ ಕಣದಲ್ಲಿದ್ದಾರೆ.

Comments are closed.