
ಬೆಂಗಳೂರು: ನೂತನ ಜೆಡಿಎಸ್-ಕಾಂಗ್ರೆಸ್ ನೇತೃತ್ವದ ಮೈತ್ರಿ ಸರ್ಕಾರ ಸಚಿವ ಸಂಪುಟ ಬುಧವಾರ ರಚನೆಯಾಗಿದ್ದು, ಹಲವು ಶಾಸಕರು ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ.
ಬೆಂಗಳೂರಿನ ರಾಜಭವನದಲ್ಲಿರುವ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಿತು. ರಾಜ್ಯಪಾಲ ವಜುಭಾಯಿ ವಾಲಾ ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
ಜೆಡಿಎಸ್ ಪಕ್ಷದಿಂದ ಸಚಿವರಾಗಿ– ಎಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪುರ, ಜಿ.ಟಿ.ದೇವೇಗೌಡ, ಮನಗೂಳಿ, ಗುಬ್ಬಿ ಶ್ರೀನಿವಾಸ್, ವೆಂಕಟರಾವ್ ನಾಡಗೌಡ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಎನ್.ಮಹೇಶ್, ಡಿ.ಸಿ. ತಮ್ಮಣ್ಣ
ಕಾಂಗ್ರೆಸ್ ಪಕ್ಷದ ಸಚಿವರು: ಆರ್ .ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಕೆ.ಜೆ. ಜಾರ್ಜ್, ಕೃಷ್ಣಬೈರೇಗೌಡ, ಶಿವಶಂಕರ ರೆಡ್ಡಿ, ರಮೇಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಯು.ಟಿ.ಖಾದರ್, ಜಮೀರ್ ಅಹ್ಮದ್ , ಶಿವಾನಂದ ಪಾಟೀಲ್ , ವೆಂಕಟರಮಣಪ್ಪ, ರಾಜಶೇಖರ್ ಪಾಟೀಲ್, ಪುಟ್ಟರಂಗಶೆಟ್ಟಿ, ಶಂಕರ್, ಜಯಮಾಲ
Comments are closed.