ಕರ್ನಾಟಕ

ಕಾಂಗ್ರೆಸ್‌, ಜೆಡಿಎಸ್‌ನ ಅತೃಪ್ತರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ: ಯಡಿಯೂರಪ್ಪ

Pinterest LinkedIn Tumblr


ಬೆಂಗಳೂರು: ಸಚಿವ ಸ್ಥಾನ ವಂಚಿತರ ಅಸಮಾಧಾನ ಭುಗಿಲೆದ್ದಿರುವ ವೇಳೆಯಲ್ಲೇ ‘ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಅತೃಪ್ತ ಮುಖಂಡರು ಬಿಜೆಪಿ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ’ ಎಂದು ಶನಿವಾರ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಖಾಸಗಿ ಹೊಟೇಲ್‌ನಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಬಿಎಸ್‌ವೈ ‘ಮುಂದಿನ ದಿನಗಳಲ್ಲಿ ನಾವು ಪ್ರಬಲ ವಿರೋಧ ಪಕ್ಷವಾಗಿ ಕೆಲಸ ಮಾಡುತ್ತೇವೆ. ಕಾಂಗ್ರೆಸ್‌ , ಜೆಡಿಎಸ್‌ನ ಮುಖಂಡರನ್ನು ಪಕ್ಷಕ್ಕೆ ಬರಮಾಡಿಕೊಂಡು ಬಿಜೆಪಿಯನ್ನು ಇನ್ನಷ್ಟು ಬಲ ಪಡಿಸಬೇಕು’ ಎಂದರು.

ನಮ್ಮಲ್ಲಿ ಯುವ, ಹೋರಾಟದ ಮಾರ್ಗದ ಮೂಲಕ ಬಂದ ಶಾಸಕರಿದ್ದಾರೆ. ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಬಲಪಡಿಸಿ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಬೇಕಾಗಿದೆ ಎಂದರು.

Comments are closed.