ಕರ್ನಾಟಕ

ಟ್ಯೂಷನ್‌ಗೆ ಹೋಗಿ ಬರುವುದಾಗಿ ಹೇಳಿ ಹೋದ 6 ಮಕ್ಕಳು ನಿಗೂಢ ನಾಪತ್ತೆ

Pinterest LinkedIn Tumblr


ಬೆಂಗಳೂರು: ಟ್ಯೂಷನ್‌ಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟ ಆರು ಮಕ್ಕಳು ನಿಗೂಢವಾಗಿ ನಾಪತ್ತೆಯಾಗಿದ್ದು, ಆತಂಕಗೊಂಡ ಪೋಷಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾಣೆಯಾದ ಮಕ್ಕಳ ಪತ್ತೆಗೆ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ರೈಲು ನಿಲ್ದಾಣ, ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.

ಸೋಮವಾರ ಟ್ಯೂಷನ್‌ಗೆ ಹೋಗಿ ಬರುವುದಾಗಿ ಹೇಳಿ ಹೋದ ವಿದ್ಯಾರ್ಥಿಗಳು ವಾಪಸ್ ಮನೆಗೆ ಬಾರದಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ. ನಾಪತ್ತೆಯಾಗಿರುವ 6 ಮಕ್ಕಳು ಒಂದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

Comments are closed.