ಕರ್ನಾಟಕ

ಅಪಪ್ರಚಾರದಿಂದ ಕಾಂಗ್ರೆಸ್‌ಗೆ ಹಿನ್ನಡೆ: ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌

Pinterest LinkedIn Tumblr


ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಐದು ವರ್ಷ ಉತ್ತಮ ಕೆಲಸ ಮಾಡಿತ್ತು. ಆದರೆ, ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ ಮಾಡಿದ್ದರಿಂದ ಹಿನ್ನಡೆಯಾಗಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಗೆ ಭೇಟಿ ಮಾಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತರು ಕಾಂಗ್ರೆಸ್‌ ಸಾಧನೆಗಳನ್ನು ಜನರಿಗೆ ತಿಳಿಸುವ ಪ್ರಯತ್ನ ಮಾಡಬೇಕು. ಪಕ್ಷಕ್ಕೆ ಪೂರ್ಣ ಬಹುಮತ ಬಾರದಿದ್ದರೆ ಕಾರ್ಯಕರ್ತರು ಎದೆಗುಂದಬಾರದು. ಪಕ್ಷಕ್ಕೆ ಪ್ರಾಮಾಣಿಕ ಕೆಲಸ ಮಾಡಿದರೆ, ಅವಕಾಶ ಸಿಕ್ಕೇ ಸಿಗುತ್ತದೆ ಎಂದರು.

ನಾನು ಮಂತ್ರಿ ಸ್ಥಾನಕ್ಕೆ ಯಾವುದೇ ಪ್ರಯತ್ನ ಮಾಡಲಿಲ್ಲ. ತಾಳ್ಮೆ ಇದ್ದವರಿಗೆ ಅವಕಾಶ ಸಿಗಲಿದೆ. ರಾಜಕೀಯ ಗಣಿತವಲ್ಲ. ರಾಜಕೀಯದಲ್ಲಿ ಒನ್‌ ಪ್ಲಸ್‌ ಒನ್‌ ಎರಡಾಗಲ್ಲ. ಇಲ್ಲಿ ಕೆಮೆಸ್ಟ್ರಿ, ಒನ್‌ ಪ್ಲಸ್‌ ಒನ್‌ ಎರಡೂ ಆಗಬಹುದು ಇಪ್ಪತ್ತೆರಡೂ ಆಗಬಹುದು. ಮೈನಸ್‌ ಎರಡೂ ಆಗಬಹುದು ಎಂದು ಹೇಳಿದರು.

Comments are closed.