ಕರ್ನಾಟಕ

25 ವರ್ಷಗಳಷ್ಟು ಹಳೆಯದಾದ ಪ್ರಕರಣಕ್ಕೆ ಇದೀಗ ಮರುಜೀವ : ಸಿದ್ದರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲು

Pinterest LinkedIn Tumblr

ಮೈಸೂರು: ಮುಖ್ಯಮಂತ್ರಿ ಹುದ್ದೆ ತೊರೆಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಸಂಕಷ್ಟದ ದಿನಗಳು ಪ್ರಾರಂಭವಾಗಿದೆ.

25 ವರ್ಷಗಳಷ್ಟು ಹಳೆಯದಾದ ಪ್ರಕರಣಕ್ಕೆ ಇದೀಗ ಮರುಜೀವ ಬಂದಿದ್ದು ಮೈಸೂರಿನ ವಿಜಯನಗರ 2ನೇ ಹಂತದಲ್ಲಿ ಅಕ್ರಮವಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಕಾಯ್ದೆ ಉಲ್ಲಂಘಿಸಿ ಸಿದ್ದರಾಮಯ್ಯ ನಿವೇಶನ ಪಡೆದಿದ್ದ ಆರೋಪದ ಹಿನ್ನೆಲೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ಈ ಸಂಬಂಧ ಪ್ರಕರಣ ಆಲಿಸಿದ್ದ ಮೈಸೂರಿನ ಸಿವಿಲ್ ಕೋರ್ಟ್ ಕಳೆದ ವಾರ ಸಿದ್ದರಾಮಯ್ಯ ಅವರ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಆದೇಶ ನೀಡಿದ್ದು ನ್ಯಾಯಾಲಯ ಆದೇಶದಂತೆ ಮೈಸೂರು ಲಕ್ಷ್ಮೀಪುರಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸೆಕ್ಷನ್ 120ಬಿ, 197, 166, 167, 169, 200, 417, 409, 420 ಹಾಗೂ ಐಪಿಸಿ ಸೆಕ್ಷನ್ 468 ಅಡಿ ವಕೀಲರಾದ ಗಂಗರಾಜು ಹಾಗೂ ಸಂಗಮೇಶ್ ದೂರು ದಾಖಲಿಸಿದ್ದಾರೆ.

Comments are closed.