ಕರ್ನಾಟಕ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಯಾಬಿನೆಟ್‌ ದರ್ಜೆ; ಪರಮೇಶ್ವರ್

Pinterest LinkedIn Tumblr


ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ , ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕ್ಯಾಬಿನೆಟ್‌ ದರ್ಜೆ ಸ್ಥಾನಮಾನ ನೀಡಲು ನಿರ್ಧರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೇಂದ್ರ ಮಟ್ಟದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕ್ಯಾಬಿನೆಟ್‌ ದರ್ಜೆ ಸ್ಥಾನಮಾನ ಇದೆ. ಸಿದ್ದರಾಮಯ್ಯ ಅವರಿಗೂ ಅಧಿಕೃತವಾಗಿ ಕ್ಯಾಬಿನೆಟ್‌ ದರ್ಜೆ ನೀಡಲು ತೀರ್ಮಾನಿಸಲಾಗಿದೆ. ಆ ಸ್ಥಾನಕ್ಕೊಂದು ಬೆಲೆ ಬರಬೇಕು. ಸಮಿತಿಯ ಅಧ್ಯಕ್ಷರಿಗೆ ಕ್ಯಾಬಿನೆಟ್‌ ದರ್ಜೆ ನೀಡಿದರೆ ಒಳ್ಳೆಯದು ಎಂದರು.

ಸೋಮವಾರ ಸಂಜೆಯ ಒಳಗೆ ಈ ಕುರಿತು ಅಧಿಕೃತ ಘೋಷಣೆಯಾಗುವ ಸಾಧ್ಯತೆಗಳಿವೆ.

ಟಿಪ್ಪು ಹೆಸರಿಡಲು ತೀರ್ಮಾನವಾಗಿಲ್ಲ

ಹಜ್‌ ಭವನಕ್ಕೆ ಟಿಪ್ಪು ಸುಲ್ತಾನ್‌ ಹೆಸರಿಡುವ ತೀರ್ಮಾನವನ್ನು ಸರ್ಕಾರ ಮಾಡಿಲ್ಲ.
ಸಮುದಾಯದವರು ಸಚಿವಗೆ ಮನವಿ ಮಾಡಿದ್ದಾರೆ. ಹಿಂದೆ ನಮ್ಮ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಿತ್ತು. ಆಗ ಬಿಜೆಪಿಯವರು ಸಾಕಷ್ಟು ಗೊಂದಲ ಮೂಡಿಸಿದ್ದರು ಎಂದರು

Comments are closed.