ಕರ್ನಾಟಕ

ರೋಹಿಣಿ ಸಿಂಧೂರಿಗೆ ಹಾಸನದ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಹೈಕೋರ್ಟ್ ಆದೇಶ

Pinterest LinkedIn Tumblr


ಬೆಂಗಳೂರು: ವರ್ಗಾವಣೆ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಅರ್ಜಿಯನ್ನು ಸೋಮವಾರ ಇತ್ಯರ್ಥಪಡಿಸಿದ್ದು, ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯುವಂತೆ ಆದೇಶ ನೀಡಿದೆ.

ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಸಮ್ಮಿಶ್ರ ಸರ್ಕಾರ ನಿರ್ಧರಿಸಿದೆ ಎಂದು ಹೆಚ್ಚುವರಿ ಅಡ್ವೋಕೇಟ್ ಜನರಲ್ ಪೊನ್ನಣ್ಣ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮಾಹಿತಿ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಹಾಸನ ಜಿಲ್ಲಾಧಿಕಾರಿಯಾಗಿ ಮುಂದುವರಿಯಲು ಸಿಂಧೂರಿಯವರಿಗೆ ಹೈಕೋರ್ಟ್ ಅಸ್ತು ಎಂದಿದ್ದು, ಹಾಸನದ ಹಾಲಿ ಜಿಲ್ಲಾಧಿಕಾರಿಯವರು ನ್ಯಾಯಾಲಯದ ಆದೇಶ ಪಾಲಿಸುವುದಾಗಿ ರಂದೀಪ್ ಪರ ವಕೀಲರು ತಿಳಿಸಿದ್ದಾರೆ.

ರೋಹಿಣಿ ಸಿಂಧೂರಿಯವರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುವ ಬಗ್ಗೆ ಸಮ್ಮಿಶ್ರ ಸರ್ಕಾರ ಶೀಘ್ರವೇ ಆದೇಶ ಹೊರಡಿಸಲಿದೆ ಎಂದು ಎಎಜಿ ಪೊನ್ನಣ್ಣ ಕೋರ್ಟ್ ಗೆ ಮಾಹಿತಿ ನೀಡಿದರು.

ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ವರ್ಗಾವಣೆ ಮಾಡಿದ್ದ ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಆದೇಶವನ್ನು ಕೆಎಟಿ(ಕರ್ನಾಟಕ ಆಡಳಿತ ನ್ಯಾಯಮಂಡಳಿ) ಎತ್ತಿ ಹಿಡಿದಿತ್ತು. ಈ ಕ್ರಮವನ್ನು ಪ್ರಶ್ನಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪುನಃ ಹೈಕೋರ್ಟ್ ಮೆಟ್ಟಿಲೇರಿದ್ದರು.

Comments are closed.