ಕರ್ನಾಟಕ

ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಯಡಿಯೂರಪ್ಪ ಬೆಂಬಲ ಕೊಟ್ಟಿದ್ದರೆ ಮುಖ್ಯಮಂತ್ರಿಯಾಗುತ್ತಿದ್ದರು!

Pinterest LinkedIn Tumblr


ಬೆಳಗಾವಿ: ಲಿಂಗಾಯತ ಮುಖಂಡ ಯಡಿಯೂರಪ್ಪ ಪ್ರತ್ಯೇಕ ಧರ್ಮದ ಹೋರಾಟ ಬೆಂಬಲಿಸದೇ ಇರುವುದಕ್ಕೆ
ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳಬೇಕಾಯಿತು ಎಂದು ನಾಗನೂರು ರುದ್ರಾಕ್ಷಿ ಮಠದ ಶ್ರೀ ಡಾ.ನಾಗನೂರು ಸಿದ್ದರಾಮ ಸ್ವಾಮೀಜಿ ಹೇಳಿದರು.

ನಗರದಲ್ಲಿ ಭಾನುವಾರ ಜಿಲ್ಲೆಯ ಲಿಂಗಾಯತ ಶಾಸಕರ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಯಡಿಯೂರಪ್ಪ ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟವನ್ನು ಬೆಂಬಲಿಸಲಿಲ್ಲ.

ಸ್ವಯಂಕೃತ ಅಪರಾಧ ಮಾಡಿ ಸಿಎಂ ಸ್ಥಾನದಿಂದ ವಂಚಿತರಾದರು. ಒಂದು ವೇಳೆ ಹೋರಾಟ ಬೆಂಬಲಿಸಿದ್ದರೆ
ಬಿಜೆಪಿ ಇನ್ನೂ ಹೆಚ್ಚಿನ ಸ್ಥಾನಗಳನ್ನು ಗೆದ್ದು ಬಹುಮತ ಪಡೆದು ಬಿಎಸ್‌ವೈ ಮುಖ್ಯಮಂತ್ರಿ ಆಗಿರುತ್ತಿದ್ದರು ಎಂದರು.

2008ರ ವಿಧಾನಸಭಾ ಚುನಾವಣೆ ವೇಳೆ ಯಡಿಯೂರಪ್ಪ ಲಿಂಗಾಯತರ ಬೆಂಬಲ ಪಡೆದು ಮುಖ್ಯಮಂತ್ರಿ ಆಗಿದ್ದರು. 2018ರಲ್ಲಿ ಕಾಂಗ್ರೆಸ್‌ಗೆ ಆಡಳಿತ ವಿರೋಧಿ ಅಲೆಯಿದ್ದರೂ ಲಿಂಗಾಯತ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರಿಂದ 78 ಸ್ಥಾನ ಪಡೆದು ಅಧಿಕಾರ ನಡೆಸುತ್ತಿದೆ. ಸಮ್ಮಿಶ್ರ ಸರ್ಕಾರದಲ್ಲಿ ಲಿಂಗಾಯತ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸಚಿವ ಸ್ಥಾನ ಹಂಚಿಕೆ ವೇಳೆ ಅನ್ಯಾಯವಾಗುತ್ತಿದೆ. ಶಾಸಕರ ಸಂಖ್ಯೆಯ ಅನುಗುಣವಾಗಿ ಸಚಿವ ಸ್ಥಾನ ನೀಡಬೇಕು ಎಂದರು.

Comments are closed.