ಕರ್ನಾಟಕ

ರೈತರ ಸಾಲ ಮನ್ನಾದಿಂದ ನನಗೆ ಯಾರೂ ಕಮಿಷನ್‌ ಕೊಡುವುದಿಲ್ಲ: ಕುಮಾರಸ್ವಾಮಿ

Pinterest LinkedIn Tumblr


ಬೆಂಗಳೂರು: ರೈತರ ಸಾಲ ಮನ್ನಾ ಆದರೆ ನನಗೆ ಯಾರೂ ಕಮಿಷನ್‌ ಕೊಡುವುದಿಲ್ಲ ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಸಾಲ ಮನ್ನಾ ಮತ್ತು ಸಹಕಾರ ಇಲಾಖೆಗೆ ಸಂಬಂಧಪಟ್ಟಂತೆ ರಾಜ್ಯದ ಎಲ್ಲ ಜಿಲ್ಲಾ ಸಹಕಾರಿ ಬ್ಯಾಂಕುಗಳ ಅಧ್ಯಕ್ಷರು, ವ್ಯವಸ್ಥಾಪಕ ನಿರ್ದೇಶಕರುಗಳು ಹಾಗೂ ಅಪೆಕ್ಸ್ ಬ್ಯಾಂಕ್ ಮತ್ತು ಸಹಕಾರ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ಸಭೆ ನಡೆಸಿದ ಬಳಿಕ ಅವರು ಮಾತನಾಡಿದರು.

ಯಾವ ರೀತಿಯಲ್ಲಿ ಸಾಲ ಮನ್ನಾ ಮಾಡಬೇಕು, ಎಷ್ಟು ಮಾಡಬೇಕು ಎಂಬಿತ್ಯಾದಿ ವಿಚಾರಗಳ ಬಗ್ಗೆ ಚರ್ಚಿಸಲಾಗಿದೆ ಎಂದ ಅವರು, ಸಾಲ ಮನ್ನಾ ವಿಚಾರದಲ್ಲಿ ಸಾಕಷ್ಟು ಅಭಿಪ್ರಾಯಗಳು ಕೇಳಿ ಬರುತ್ತಿವೆ. ಸಾಲ ಮನ್ನಾದಿಂದ ರೈತರಿಗೆ ಅನುಕೂಲ ಆಗಬೇಕೇ ಹೊರತು ಮಧ್ಯವರ್ತಿಗಳಿಗಲ್ಲ. ನಾನು ಎಷ್ಟೇ ಕಷ್ಟ ಇದ್ದರೂ ರೈತರನ್ನು ಉಳಿಸಲು ಸಿದ್ಧನಾಗಿದ್ದೇನೆ. ಸಾಲ ಮನ್ನಾ ಒಂದೇ ರೈತರ ಸಮಸ್ಯೆಗಳಿಗೆ ಪರಿಹಾರವಲ್ಲ. ಈ ನಿಟ್ಟಿನಲ್ಲೂ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ ಎಂದರು.

ಸಾಲ ಮನ್ನಾ ಯೋಜನೆಗೆ ಸಹಕಾರಿ ಬ್ಯಾಂಕ್‌ಗಳು ವಿರೋಧ ವ್ಯಕ್ತಪಡಿಸಿಲ್ಲ. ಸಹಕಾರಿ ಕ್ಷೇತ್ರದಲ್ಲಿ 7 ಸಾವಿರಕ್ಕೂ ಹೆಚ್ಚು ಕೋಟಿ ರೂ. ಹಣ ಬೇಕು ಎಂಬ ಮಾಹಿತಿ ಸಿಕ್ಕಿವೆ. ಇದಲ್ಲದೆ ಯೋಜನೆ ಜಾರಿಗೆ ಇನ್ನೂ ಹಲವಾರು ರೀತಿಯ ಮಾಹಿತಿ ಪಡೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

Comments are closed.