ಕರ್ನಾಟಕ

ರೈತರ 2 ಲಕ್ಷ ರೂ. ವರೆಗಿನ ಸಾಲ ಮನ್ನಾ: ಬಜೆಟ್ ನಲ್ಲಿ ಸಿಎಂ ಕುಮಾರಸ್ವಾಮಿ ಘೋಷಣೆ

Pinterest LinkedIn Tumblr

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ 2018 ಅನ್ನು ಸಿಎಂ ಕುಮಾರಸ್ವಾಮಿ ಮಂಡನೆ ಮಾಡುತ್ತಿದ್ದು, ನಿರೀಕ್ಷೆಯಂತೆಯೇ ರೈತರ ಸಾಲಮನ್ನಾ ಕುರಿತು ಬಜೆಟ್ ನಲ್ಲಿ ಘೋಷಣೆ ಮಾಡಲಾಗಿದೆ.

ಇಂದು ವಿಧಾನಸೌಧಲ್ಲಿ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಮಂಡಿಸಿದ ಸಿಎಂ ಕುಮಾರಸ್ವಾಮಿ ಅವರು, 31-12-2017ರವರೆಗೂ ಬ್ಯಾಂಕ್ ಗಳಲ್ಲಿರುವ ರೈತರ ಸುಮಾರು 2 ಲಕ್ಷ ರೂ.ವರೆಗಿನ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದರು. ರಾಜ್ಯ ಸರ್ಕಾರ ಒಟ್ಟು 34 ಸಾವಿರ ಕೋಟಿ ರೂ.ಗಳ ವರೆಗಿನ ರೈತರ ಸಾಲ ಮನ್ನಾ ಮಾಡಲು ನಿರ್ಧರಿಸಿದೆ ಎಂದು ಕುಮಾರಸ್ವಾಮಿ ಹೇಳಿದರು.

ಅಂತೆಯೇ ಈಗಾಗಲೇ 2 ಲಕ್ಷ ರೂ ವರೆಗಿನ ಸಾಲ ಪಾವತಿ ಮಾಡಿರುವ ರೈತರ ಖಾತೆಗಳಿಗೆ ರಾಜ್ಯ ಸರ್ಕಾರ ಸಾಲದ ಮೊತ್ತವನ್ನು ಮರುಪಾವತಿ ಮಾಡಲಿದೆ ಎಂದೂ ಕುಮಾರಸ್ವಾಮಿ ಹೇಳಿದರು. ಇದಲ್ಲದೆ ರೈತರ ಸಾಲ ಮರುಪಾವತಿ ಉತ್ತೇಜಿಸುವ ನಿಟ್ಟಿನಲ್ಲಿ ಈಗಾಗಲೇ ಸಾಲ ಮರುಪಾವತಿ ಮಾಡಿರುವ ರೈತರಿಗೆ ಸಾಲದ ಮೊತ್ತ ಅಲ್ಲದೆ 25 ಸಾವಿರ ರೂ. ಹೆಚ್ಚುವರಿ ಹಣವನ್ನು ಉತ್ತೇಜನ ಧನವಾಗಿ ನೀಡಲಾಗುತ್ತದೆ ಎಂದು ಕುಮಾರಸ್ವಾಮಿ ಘೋಷಣೆ ಮಾಡಿದರು.

ಅಂತೆಯೇ ಕೃಷಿ ಅಭಿವೃದ್ಧಿಗೂ ಸಿಎಂ ಕುಮಾರಸ್ವಾಮಿ ಆಧ್ಯತೆ ನೀಡಿದ್ದು, ಇಸ್ರೇಲ್ ಮಾದರಿಯ ನೀರಾವರಿ ವ್ಯವಸ್ಥೆ ಅಳವಡಿಕೆಗೆ 150 ಕೋಟಿ ರೂ. ಮೀಸಲಿಡುವುದಾಗಿ ಹೇಳಿದ್ದಾರೆ.

Comments are closed.