ಕರ್ನಾಟಕ

ಕಾಂಗ್ರೆಸ್ – ಜೆಡಿಎಸ್ ಎರಡು ಪಕ್ಷಗಳ ಚುನಾವಣಾ ಪ್ರಣಾಳಿಕೆಗಳನ್ನು ಒಗ್ಗೂಡಿಸಿದ ಬಜೆಟ್​: ಮಾಜಿ ಸಿಎಂ ಸಿದ್ದರಾಮಯ್ಯ

Pinterest LinkedIn Tumblr

ಬೆಂಗಳೂರು: ಇದು ಕಾಂಗ್ರೆಸ್ ಮತ್ತು ಜೆಡಿಎಸ್ ಎರಡು ಪಕ್ಷಗಳ ಚುನಾವಣಾ ಪ್ರಣಾಳಿಕೆಗಳನ್ನು ಒಗ್ಗೂಡಿಸಿದ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಸಮ್ಮಿಶ್ರ ಸರ್ಕಾರದ ಮೊದಲ ಬಜೆಟ್ ಮಂಡಿಸಿದ ಬಳಿಕ ವಿಧಾಸೌಧದ ಬಳಿ ಬಜೆಟ್ ಬಗ್ಗೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ಇದು ಎರಡು ಪಕ್ಷಗಳನ್ನು ಒಗ್ಗೂಡಿಸಿದ ಬಜೆಟ್. ಈ ಬಜೆಟ್ ಗೆ ಸಮನ್ವಯ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದರು.

ಈ ಬಜೆಟ್​ನಲ್ಲಿ ರೈತರ ಸಾಲಮನ್ನಾ ಮಾಡಲಾಗಿದೆ. ಅದಕ್ಕೆ ಸಂಪನ್ಮೂಲ ಕ್ರೋಡಿಕರಿಸುವುದಕ್ಕಾಗಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಸ್ವಲ್ಪ ಹೆಚ್ಚಿಸಲಾಗಿದೆ ಮತ್ತು ಕೆಲವು ಹೊಸ ತೆರಿಗೆಗಳನ್ನ ಸಹ ಪರಿಚಯಿಸಲಾಗಿದೆ. ಇದು ಜನರಿಗೆ ಹೆಚ್ಚು ಹೊರೆಯಾಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Comments are closed.