ಕರ್ನಾಟಕ

ರೈತ ಸಂಘಟನೆಯಿಂದ ಸಂಪೂರ್ಣ ಸಾಲಮನ್ನಾಕ್ಕೆ ಆಗ್ರಹಿಸಿ ಪ್ರತಿಭಟನೆ

Pinterest LinkedIn Tumblr


ಬೆಂಗಳೂರು: ಸಾಲಮನ್ನಾ ಹೆಸರಿನಲ್ಲಿ ಸರ್ಕಾರ ಅನ್ಯಾಯ ಮಾಡಿದೆ. ರೈತರ ಸಂಪೂರ್ಣ ಸಾಲ ಮನ್ನಾ ಮಾಡುವಂತೆ ಪಟ್ಟು ಹಿಡಿದಿರುವ ರೈತ ಸಂಘ ಹಾಗೂ ಹಸಿರು ಸೇನೆ ನಗರದ ಶೇಷಾದ್ರಿ ರಸ್ತೆಯಲ್ಲಿ ಸೋಮವಾರ ಪ್ರತಿಭಟನೆ ನಡೆಸುತ್ತಿದೆ.

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.

ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಅವಕಾಶ ಮಾಡಿಕೊಡಬೇಕು, ಇಲ್ಲವೇ ಕುಮಾರಸ್ವಾಮಿಯವರೇ ಸ್ಥಳಕ್ಕೆ ಆಗಮಿಸಬೇಕೆಂದು ಪಟ್ಟು ಹಿಡಿದಿದ್ದಾರೆ.

ವಿಧಾನಸೌಧಕ್ಕೆ ಮುತ್ತಿಗೆ ಯತ್ನ, ಹಲವು ರೈತರು ಪೊಲೀಸರ ವಶಕ್ಕೆ:

ಸಂಪೂರ್ಣ ಸಾಲಮನ್ನಾ ಮಾಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಸಂದರ್ಭದಲ್ಲಿ ಬೆಂಗಳೂರಿನ ಮೌರ್ಯ ಸರ್ಕಲ್ ಸಮೀಪ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.

ಸಿಎಂ ಭೇಟಿಗೆ ಅವಕಾಶ;

ಸಂಪೂರ್ಣ ಸಾಲಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿಭಟನೆಗೆ ಮಣಿದಿರುವ ಸಿಎಂ ಕುಮಾರಸ್ವಾಮಿ ಅವರು ರೈತರ ನಿಯೋಗಕ್ಕೆ ಭೇಟಿಯಾಗಲು ಅವಕಾಶ ಕಲ್ಪಿಸಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

Comments are closed.