ಕರ್ನಾಟಕ

ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದರೆ ನಾವು ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಬೆಂಬಲ : ಶ್ರೀರಾಮುಲು

Pinterest LinkedIn Tumblr

ಬೆಂಗಳೂರು: ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದರೆ ನಾವು ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಅವರು ಬುಧವಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಇಂದು ವಿಧಾನಸಭೆಯಲ್ಲಿ ಬಜೆಟ್​ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಶ್ರೀರಾಮುಲು ಅವರು, ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆಗೆ ನಮ್ಮ ಬೆಂಬಲವಿದೆ. ಬಜೆಟ್​ನಲ್ಲಿ ಉತ್ತರ ಕರ್ನಾಟಕಕ್ಕೆ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ನಾವು ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಬೆಂಬಲಿಸುತ್ತೇವೆ ಎಂದರು.

ಜೆಡಿಎಸ್​ ತಾನು ಪರಾಭವಗೊಂಡಿರುವ ಕ್ಷೇತ್ರಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ಆ ಕ್ಷೇತ್ರಗಳಿಗೆ ಸಮರ್ಪಕ ಯೋಜನೆ, ಅನುದಾನ ನೀಡದೆ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.

ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಧೋರಣೆಯಿಂದ ಬೇಸತ್ತು ನಾವು ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸುವ ಪರಿಸ್ಥಿತಿ ಬಂದಿದೆ ಎಂದು ರಾಮುಲು ಹೇಳಿದ್ದಾರೆ.

Comments are closed.