ಕರ್ನಾಟಕ

ಅಕ್ಕಿ ಪ್ರಮಾಣ ಹೆಚ್ಚಿಸಲು ಕೇಂದ್ರಕ್ಕೆ ಮನವಿ ಮಾಡಲಿದ್ದಾರೆ ಸಿಎಂ ಎಚ್ಡಿಕೆ

Pinterest LinkedIn Tumblr


ಬೆಂಗಳೂರು: ಅನ್ನ ಭಾಗ್ಯ ಕಾರ್ಯಕ್ರಮದಲ್ಲಿ ಸದ್ಯ ಕಡಿತವಾಗಿರುವ ಎರಡು ಕೆ.ಜಿ ಅಕ್ಕಿಯನ್ನು ಮರಳಿ ನೀಡಲು ಹರಸಾಹಸ ಪಡುತ್ತಿರುವ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರು, ಇದಕ್ಕಾಗಿ, ಕೇಂದ್ರದಿಂದ ನೀಡುವ ಅಕ್ಕಿ ಪ್ರಮಾಣವನ್ನು ಹೆಚ್ಚಿಸುವಂತೆ ಇಂದು ಮನವಿ ಮಾಡಲಿದ್ದಾರೆ.

ಇಂದು ಕೇಂದ್ರದ ಹಲವು ಸಚಿವರನ್ನು ಭೇಟಿ ಮಾಡಲು ದೆಹಲಿಗೆ ತೆರಳುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಮಧ್ಯಾಹ್ನ 3.30ಕ್ಕೆ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಚಿವ ರಾಮ್​ವಿಲಾಸ್​ ಪಾಸ್ವಾನ್​ ಅವರನ್ನು ಭೇಟಿ ಮಾಡಲಿದ್ದಾರೆ. ಕರ್ನಾಟಕಕ್ಕೆ ಸದ್ಯ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಹೆಚ್ಚಳ ಮಾಡುವಂತೆ ಮನವಿ ಮಾಡಲಿದ್ದಾರೆ. ಒಂದು ವೇಳೆ ಕೇಂದ್ರ ಸರ್ಕಾರ ಅಕ್ಕಿಯ ಪ್ರಮಾಣವನ್ನು ಹೆಚ್ಚಿಸಿದರೆ ಈಗ ಕಡಿತ ಮಾಡಿರುವ ಎರಡು ಕೆ.ಜಿ ಅಕ್ಕಿಯನ್ನು ಪುನಃ ನೀಡುವುದು ಸರ್ಕಾರದ ಉದ್ದೇಶವಾಗಿದೆ.

ರಾಮ್​ವಿಲಾಸ್​ ಪಾಸ್ವಾನ್​ ಭೇಟಿಯ ನಂತರ ಸಾರಿಗೆ ಸಚಿವ ನಿತಿನ್​ ಗಡ್ಕರಿ, ಕೃಷಿ ಸಚಿವ ರಾಧಾ ಮೋಹನ್​ ಸಿಂಗ್​, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್​, ರೈಲ್ವೆ ಸಚಿವ ಪಿಯೂಶ್ ಗೋಯೆಲ್​ರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಗೆ ಪೂರಕ ಅಂಶಗಳ ಕುರಿತು ಚರ್ಚೆ ನಡೆಸಲಿದ್ದಾರೆ.

Comments are closed.