
ಬೆಂಗಳೂರು: ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದ ಮಾಲೀಕನ್ನು ಪೊಲೀಸರು ಬಂಧಿಸಿದ್ದಾರೆ.
28 ವರ್ಷದ ಯುವತಿಗೆ ಮನೆ ಬಾಡಿಗೆ ಕೊಡಿಸುವುದಾಗಿ ನಂಬಿಸಿ ರಿಯಲ್ ಎಸ್ಟೇಟ್ ಉದ್ಯಮಿ ಓಬಳಪ್ಪ, ಲಾಡ್ಜ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಲು ಯತ್ನಿಸಿದ್ದ.
ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದ ಯುವತಿ, ಹಲವು ದಿನಗಳಿಂದ ಬಾಡಿಗೆ ಮನೆಯ ಹುಡುಕಾಟದಲ್ಲಿದ್ದರು. ಸಹೋದ್ಯೋಗಿಯ ಮೂಲಕ ಓಬಳಪ್ಪನ ಪರಿಚಯವಾಗಿತ್ತು. ಜು. 17 ರಂದು ಕರೆ ಮಾಡಿ ಮನೆ ತೋರಿಸುವುದಾಗಿ ಹೇಳಿ ಎಚ್.ವಿ. ಹಳ್ಳಿ ಸರ್ಕಲ್‌ಬಳಿ ಕರೆದಿದ್ದಾನೆ. ಬಾಡಿಗೆ ವಿಚಾರ ಮಾತನಾಡೋಣ ಎಂದು ಹೇಳಿ ಸ್ಥಳೀಯ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದ.
ನಂತರ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದ ಯುವತಿಯನ್ನು ಹಿಂಬಾಲಿಸಿ ಬಂದಿದ್ದ ಉದ್ಯಮಿ ಪೊಲೀಸರಿಗೆ ದೂರು ಕೊಟ್ಟರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಒಡ್ಡಿದ್ದ. ಇದಲ್ಲದೆ ನಮ್ಮಿಬ್ಬರ ನಡುವೆ ಲೈಂಗಿಕ ಸಂಪರ್ಕ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿ ಮರ್ಯಾದೆ ತೆಗೆಯುತ್ತೇನೆ ಎಂದು ಹೆದರಿಸಿದ್ದಾನೆ.
ಈ ಕುರಿತು ಆರ್.ಆರ್. ನಗರ ಪೊಲೀಸ್ ಠಾಣೆಯಲ್ಲಿ ಯುವತಿ ಪ್ರಕರಣ ದಾಖಲಿಸಿದ್ದು, ಸದ್ಯ ಆರೋಪಿ ಓಬಳಪ್ಪನನ್ನ ಬಂಧಿಸಿ ತನಿಖೆ ಕೈಗೊಳ್ಳಲಾಗಿದೆ.
Comments are closed.