ಕರ್ನಾಟಕ

ಎಚ್.ವಿಶ್ವನಾಥ್ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ

Pinterest LinkedIn Tumblr

ಬೆಂಗಳೂರು: ಜಾತ್ಯಾತೀತ ಜನತಾ ದಳ (ಜೆಡಿಎಸ್) ಪಕ್ಷದ ನೂತನ ರಾಜ್ಯಾಧ್ಯಕ್ಷರಾಗಿ ಮಾಜಿ ಸಚಿವ, ಹುಣಸೂರಿನ ಶಾಸಕ ಅಡಗೂರು ಎಚ್.ವಿಶ್ವನಾಥ್ ಆಯ್ಕೆಯಾಗಿದ್ದಾರೆ.

ಜೆಡಿಎಸ್ ಮುಖ್ಯಸ್ಥ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ವಿಶ್ವನಾಥ್ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ. ಖುದ್ದು ದೇವೇಗೌಡರೇ ವಿಶ್ವನಾಥ್ ಅವರಿಗೆ ದೂರವಾಣಿ ಕರೆ ಮಾಡಿ ಈ ವಿಷಯ ತಿಳಿಸಿದ್ದಾರೆ.

ವಿಶ್ವನಾಥ್ ಸಹ ತಾವು ಈ ಹೊಸ ಜವಾಬ್ದಾರಿ ನಿಭಾಯಿಸಲು ಸಮ್ಮತಿಸಿದ್ದಾರೆ.ಎನ್ನಲಾಗಿದ್ದು ಆಗಸ್ಟ್ 5 ರಂದು ನೂತನ ರಾಜ್ಯಾಧ್ಯಕ್ಷರ ನೇಮಕದ ಅಧಿಕೃತ ಘೋಷಣೆ ಹೊರಬೀಳಲಿದೆ.

ಪ್ರಸ್ತುತ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಎಚ್.ಡಿ. ಕುಮಾರಸ್ವಾಮಿ ಇದೀಗರಾಜ್ಯದ ಮುಖ್ಯಮಂತ್ರಿಯಾಗಿರುವ ಕಾರಣ ಎಚ್.ವಿಶ್ವನಾಥ್ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಲು ದೇವೇಗೌಡರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

Comments are closed.