ಕರ್ನಾಟಕ

ಮಂಡ್ಯದ ಒಂದೇ ಕುಟುಂಬದ ನಾಲ್ವರಿಂದ ವಿಷ ಸೇವನೆ

Pinterest LinkedIn Tumblr


ಮಂಡ್ಯ: ಬೆಂಗಳೂರು ಮೈಸೂರು ಹೆದ್ದಾರಿಯ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗೇಟ್ ಬಳಿ ಕಾರಿನಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿದ್ದಾರೆ.

ಪಾಂಡವಪುರ ತಾಲೂಕಿನ ದೊಡ್ಡ ಬ್ಯಾಡರಹಳ್ಳಿಯ ಮರೀಗೌಡ (48), ರಜಿನಿ (44), ಚಂದ್ರು (13), ಚೇತನ್ (10) ಎಂಬವರು ಮಾರುತಿ ಓಮ್ನಿ ಕಾರಿನಲ್ಲಿ ವಿಷ ಸೇವಿಸಿದ್ದಾರೆ. ಅವರ ಸ್ಥಿತಿ ಗಂಭೀರವಾಗಿದ್ದು, ಅಸ್ವಸ್ಥಗೊಂಡಿರುವ ಎಲ್ಲರನ್ನೂ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ತರಕಾರಿ ವ್ಯಾಪಾರದಲ್ಲಿ ನಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ ಆತ್ಮಹತ್ಯೆ ಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಮೋಕ್ಷ ಪ್ರಾಪ್ತಿಗಾಗಿ ಆತ್ಮಹತ್ಯೆ ಯತ್ನ ಶಂಕೆಯೂ ವ್ಯಕ್ತವಾಗಿದೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Comments are closed.