
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟ್ಟೆಚ್ಚರ ವಹಿಸಲು ಸೂಚಿಸಿದ್ದಾರೆ.
ಕೊಡಗು, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಿ ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಸಿಎಂ ನಿರ್ದೇಶಿಸಿದ್ದು, ಮಳೆಯಿಂದ ಸಂಭವಿಸಬಹುದಾದ ಪ್ರವಾಹ, ಭೂ ಕುಸಿತ ಮತ್ತಿತರ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ಕ್ರಮ ಕೈಗೊಂಡು, ಪರಿಹಾರ ಒದಗಿಸಲು ಸನ್ನದ್ಧರಾಗಿರುವಂತೆ ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಮತ್ತು ಪರಿಹಾರ ಒದಗಿಸಲು ಸನ್ನದ್ಧರಾಗಿರುವಂತೆ ಸೂಚಿಸಿದ್ದಾರೆ.
ವಾಹನ ಸಂಚಾರ ಸ್ಥಗಿತ
ಭಾರೀ ಮಳೆಯಿಂದ ಸೋಮವಾರಪೇಟೆ ಹಾಗೂ ಶಾಂತಳ್ಳಿ ಮಾರ್ಗವಾಗಿ ಸಕಲೇಶಪುರಕ್ಕೆ ಹೋಗುವ ರಾಜ್ಯ ಹೆದ್ದಾರಿಯ ಮಾಗೇರಿ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ.
Comments are closed.