ಕರ್ನಾಟಕ

ಕೊಡಗಿನ ಪ್ರವಾಹ ಪರಿಸ್ಥಿತಿ ಕುರಿತು ಕುಮಾರಸ್ವಾಮಿಗೆ ಕರೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

Pinterest LinkedIn Tumblr


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕರೆ ಮಾಡಿ, ಭಾರಿ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿರುವ ಕರ್ನಾಟಕದ ಕೊಡಗು ಜಿಲ್ಲೆಯ ಪರಿಸ್ಥಿತಿಯ ಬಗ್ಗೆ ಭಾನುವಾರ ಮಾಹಿತಿ ಪಡೆದುಕೊಂಡಿದ್ದಾರೆ.
‘ಪ್ರವಾಹ ಪರಿಸ್ಥಿತಿ ಕುರಿತು ಕರ್ನಾಟಕ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತನಾಡಿದ್ದೇನೆ . ಜನರನ್ನು ರಕ್ಷಣೆ ಮಾಡುವುದು ಮತ್ತು ಪರಿಹಾರ ಕಾರ್ಯಗಳಲ್ಲಿ ಸಾಧ್ಯವಾದಷ್ಟು ನೆರವನ್ನು ನಾವು ನೀಡುತ್ತೇವೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಜನರ ಸುರಕ್ಷತೆ ಮತ್ತು ಯೋಗ ಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದಾರೆ.
ಇಂದು ಮಡಿಕೇರಿಯಲ್ಲಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಪ್ರಧಾನಿ ಮೋದಿ ಕರೆ ಮಾಡಿದ್ದು, ಮಧ್ಯದಲ್ಲೇ ಎದ್ದು ಹೋದ ಸಿಎಂ, ಕೊಡಗಿನಲ್ಲಿ ಪರಿಹಾರ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ಸೇನಾ ಸಿಬ್ಬಂದಿ, ಎನ್.ಡಿ.ಆರ್.ಎಫ್. ಮತ್ತು ಇತರ ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಇದುವರೆಗೆ 3500 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಪ್ರಧಾನಿಗೆ ಮಾಹಿತಿ ನೀಡಿದ್ದಾರೆ.

Narendra Modi
@narendramodi
Spoke to Karnataka CM Shri @hd_kumaraswamy Ji regarding the flood situation in parts of the state. Extended all possible support in the rescue and relief operations. I pray for the safety and well-being of those in the flood affected areas. @CMofKarnataka

4:55 PM – Aug 19, 2018

Comments are closed.