ಕರ್ನಾಟಕ

ಏನೇ ಸಮಸ್ಯೆ ಬಂದರೂ ಬಿಜೆಪಿಗೆ ಹೋಗುವುದಿಲ್ಲ; ರಮೇಶ್​ ಜಾರಕಿಹೊಳಿ

Pinterest LinkedIn Tumblr


ಬೆಂಗಳೂರು: ತಮ್ಮ ಬೇಡಿಕೆ ಈಡೇರಿದದಿದ್ದರೆ ಮೈತ್ರಿ ಸರ್ಕಾರ ಬೀಳಿಸಲು ಪಕ್ಷ ತೊರೆಯಲು ಮುಂದಾಗಿದ್ದ ಸಚಿವ ರಮೇಶ್​ ಜಾರಕಿಹೊಳಿ ತಾವು ಯಾವುದೇ ಕಾರಣಕ್ಕೂ ಪಕ್ಷ ತೊರೆಯುವುದಿಲ್ಲ. ಬಿಜೆಪಿ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಿಎಂ ಭೇಟಿ ಬಳಿಕ ಮೊದಲಬಾರಿಗೆ ಪ್ರತಿಕ್ರಿಯೆ ನೀಡಿದ ಅವರು, ಕುಮಾರಸ್ವಾಮಿ ಭೇಟಿಯಾದ ಬಳಿಕ ನಮ್ಮ ಸಮಸ್ಯೆಗಳೆಲ್ಲಾ ಬಗೆಹರಿದಿವೆ. ನಮ್ಮ‌ ಸಮುದಾಯಕ್ಕೆ ಮೀಸಲಾತಿ ಕೊಡುವ ಬಗ್ಗೆ ಸಿಎಂಗೆ ಕೇಳಿದ್ದೇವೆ. ಅದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ‌ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿಸಿದರು.

ಮೈತ್ರಿ ಸರ್ಕಾರದಲ್ಲಿ ಕೆಲವು ವಿಚಾರಗಳಲ್ಲಿ ನನಗೆ ಸಿಟ್ಟು ಇತ್ತು, ಈಗ ಅವೆಲ್ಲವೂ ಮುಗಿದಿದೆ. ಆಂತರಿಕ ವಿಷಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲ. ನನ್ನಿಂದ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಅಭಯವನ್ನು ನೀಡಿದರು.

ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿದ್ದ ಅವರ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು ಈ ಬಗ್ಗೆ ನಾನೇನು ಮಾತನಾಡುವುದಿಲ್ಲ ಎಂದರು

ನಮ್ಮ ಸಮುದಾಯ ಅಲ್ಲದೆ ಅಹಿಂದ ಸಮುದಾಯದ ಪರ ಕೆಲಸ ಮಾಡ್ತಿದ್ದೇವೆ. ಅಹಿಂದ ಶಾಸಕರು ಬಂದು ನನ್ನನ್ನು ಭೇಟಿಯಾಗುತ್ತಿದ್ದಾರೆ. ಅವರ ಬೇಡಿಕೆಗಳ ಬಗ್ಗೆ ನನ್ನ ಬಳಿ ಚರ್ಚೆ ಮಾಡುತ್ತಿದ್ದಾರೆ ಅಷ್ಟೇ. ಕಾಂಗ್ರೆಸ್ ‌ನ ನಾಯಕನಾಗಿ ನಾನು‌ ಬಿಜೆಪಿಗೆ ಹೋಗುವುದಿಲ್ಲ. ಕಾಂಗ್ರೆಸ್ ‌ನಲ್ಲಿ ಇರುತ್ತೇನೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ತೊರೆಯುವುದಿಲ್ಲ..

Comments are closed.