ತುಮಕೂರು: ಜಿಲ್ಲೆಯ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ನಿರ್ವೀರ್ಯರಾಗಿದ್ದಾರೆ ಎಂದು ಮಾಜಿ ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಗುರುವಾರ ಕಿಡಿ ಕಾರಿದ್ದಾರೆ.
ಸುದ್ದಿಗೋಷ್ಠಿ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಅವರು ‘ನಿರ್ವೀರ್ಯರಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ತುಮಕೂರು ಜಿಲ್ಲೆ ನಾಶ ಮಾಡುತ್ತಿದ್ದಾರೆ. ಉಪಮುಖ್ಯಮಂತ್ರಿ ಪರಮೇಶ್ವರ್ ಅವರು ಝೀರೋ ಟ್ರಾಫಿಕ್‌ಗಾಗಿ ಹೋರಾಟ ಮಾಡುತ್ತಾರೆ’ ಎಂದು ಕಿಡಿ ಕಾರಿದರು.
‘ಹೇಮಾವತಿ ನದಿ ನೀರನ್ನು ಜಿಲ್ಲೆಗೆ ಸದುಪಯೋಗಪಡಿಸಬೇಕು ಎಂದು ಒತ್ತಾಯಿಸಿದ ಅವರು ಸಚಿವ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದರು. ನಮ್ಮ ಜಿಲ್ಲೆಯ ನೀರನ್ನು ಕನಕಪುರಕ್ಕೆ ಕೊಂಡೊಯ್ಯಲು ಸಿದ್ದತೆ ನಡೆಸಿದ್ದಾರೆ’ ಎಂದು ಕಿಡಿ ಕಾರಿದರು.
Comments are closed.