ಕರ್ನಾಟಕ

ರಾಮನಗರ ಉಪಚುನಾವಣೆ; ಬಿಜೆಪಿಯಿಂದ ರುದ್ರೇಶ್​ ಕಣಕ್ಕೆ

Pinterest LinkedIn Tumblr


ಬೆಂಗಳೂರು: ರಾಮನಗರ ಉಪಚುನಾವಣೆಯಲ್ಲಿ ಜೆಡಿಎಸ್​- ಕಾಂಗ್ರೆಸ್​ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಖಚಿತ ಹಿನ್ನೆಲೆ, ಬಿಜೆಪಿ ಅಭ್ಯರ್ಥಿಯಾಗಿ ರುದ್ರೇಶ್​​ ಅವರನ್ನು ಆಯ್ಕೆ ಮಾಡಲಾಗಿದೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಅಭ್ಯರ್ಥಿ ಕಣಕ್ಕೆ ಇಳಿಸಲು ತೀರ್ಮಾನ ಮಾಡಿದೆ. ಈ ಹಿನ್ನೆಲೆಯಲ್ಲಿ ನೇರಾನೇರ ಪೈಪೋಟಿಗೆ ರುದ್ರೇಶ್ ಸೂಕ್ತ ಎಂದು ತೀರ್ಮಾನಿಸಿರುವ ಬಿಜೆಪಿ, ಅನಿತಾ ಕುಮಾರಸ್ವಾಮಿ ವಿರುದ್ಧ ರುದ್ರೇಶ್ ಅವರನ್ನು​ ಕಣಕ್ಕಿಳಿಸಲು ನಿರ್ಧರಿಸಿದೆ.

ಈ ಹಿನ್ನೆಲೆ ಬಿಜೆಪಿಯಿಂದ ಅಭ್ಯರ್ಥಿ ಅಂತಿಮಗೊಳಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ಬಿಜೆಪಿ ಕಚೇರಿಯಲ್ಲಿ ಬಿ.ಎಸ್.ಯಡಿಯೂರಪ್ಪ ಮಾತುಕತೆ ನಡೆಸುತ್ತಿದ್ದು, ರಾಮನಗರ ಜಿಲ್ಲಾಧ್ಯಕ್ಷ ರುದ್ರೇಶ್ ಅವರನ್ನು ಸಭೆಗೆ ಕರೆಸಿಕೊಳ್ಳಲಾಗಿದೆ. ಯಡಿಯೂರಪ್ಪ ಅಭ್ಯರ್ಥಿಗಳ ಬಗ್ಗೆ ಪ್ರಾಥಮಿಕ‌ ಮಾಹಿತಿ ಪಡೆಯುತ್ತಿದ್ದು, ಚರ್ಚೆ ಬಳಿಕ ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ.

ಇನ್ನೂ ಕಾಂಗ್ರೆಸ್​ ಮತ್ತು ಜೆಡಿಎಸ್​ ಅಭ್ಯರ್ಥಿಯಾಗಿ ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಬಹುತೇಕ ಖಚಿತ ಎನ್ನಲಾಗಿದೆ. ಇಂದು ಬಿಡದಿಯ ಕೇತಗಾನಹಳ್ಳಿಯಲ್ಲಿರುವ ಸಿಎಂ ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಜೆಡಿಎಸ್​ ಕಾರ್ಯಕರ್ತ ಸಭೆ ನಡೆಯುತ್ತಿದ್ದು, ಸಭೆ ಬಳಿಕ ಅಧಿಕೃತ ಘೋಷಣೆ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಿಎಂ ಕುಮಾರಸ್ವಾಮಿ ಕಾರ್ಯಕರ್ತರ ಜೊತೆ ಸಭೆ ನಡೆಸಿ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡಲಿದ್ದಾರೆ.

Comments are closed.