
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಆರಂಭವಾಗಿದೆ. ಸ್ವಲ್ಪ ದಿನ ಬಿಡುವು ಕೊಟ್ಟಿದ್ದ ವರುಣನೀಗ ಮತ್ತೆ ಚುರುಕಾಗಿದ್ದು, ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಕಟ್ಟೆಚ್ಚರ ನೀಡಿದೆ.
ಹವಾಮಾನ ಇಲಾಖೆಯಿಂದ 12 ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದ್ದು, ಮುಂದಿನ 3 ಗಂಟೆಗಳಲ್ಲಿ ವೇಗವಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 32 ಕಿ.ಮೀ. ವೇಗವಾಗಿ ಗಾಳಿ ಬೀಸಲಿದ್ದು ಅದರ ವೇಗ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಉಡುಪಿ, ದಕ್ಷಿಣಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಮೈಸೂರು, ಚಾಮರಾಜನಗರ ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.
ಅಂಡಮಾನ್ ಸಮೀಪ ವಾಯುಭಾರ ಕುಸಿತ ಹಿನ್ನಲೆ ಮುಂದಿನ 72 ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳು ಸೇರಿದಂತೆ ಇತರೆಡೆ ಭಾರಿ ಮಳೆಯಾಗುತ್ತೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದರಲ್ಲೂ ಬೆಂಗಳೂರಿನಲ್ಲಿ ಅತಿ ಹೆಚ್ಚು ಮಳೆ ಬೀಳಲಿದ್ದು ಕಳೆದ ಬಾರಿಗಿಂತ ಈ ಬಾರಿ ತುಸು ಹೆಚ್ಚಾಗಿಯೇ ಮಳೆ ಬೀಳಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ ರೆಡ್ಡಿ ಹೇಳಿದ್ದಾರೆ.
ಇನ್ನು ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದ್ದು ರಾಜಕಾಲುವೆಗಳ ಅಕ್ಕ ಪಕ್ಕ ವಾಸ ಮಾಡುವವರು ಎಚ್ಚರದಿಂದರಬೇಕು ಅಂತ ಹವಾಮಾನ ಇಲಾಖೆ ತಿಳಿಸಿದೆ.
ಇವತ್ತು ಸಹ ಬೆಳೆಗ್ಗಯಿಂದಾನೆ ಬೆಂಗಳೂರಿನಾದ್ಯಂತ ಭಾರಿ ಮಳೆಯಾಗಿದ್ದು ಕೆಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ವರದಿಯಾಗಿದೆ. ಇನ್ನು ಟ್ರಾಫಿಕ್ಟ್ ಜಾಮ್‌ನಿಂದ ಜನ ತತ್ತರಿಸಿ ಹೋಗಿದ್ದಾರೆ.
ಈಗಾಗಲೇ ಮಳೆಯ ವಿಚಾರವಾಗಿ ಬಿಬಿಎಂಪಿಗೆ ಸೂಕ್ತ ಮಾಹಿತಿಯನ್ನು ಇಲಾಖೆ ನೀಡಿದ್ದು ಸಿಬ್ಬಂದಿಗಳು ಯಾವುದೇ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ ಇರುವಂತೆ ಸೂಚನೆ ನೀಡಲಾಗಿದೆ. ಯಾಕಂದ್ರೆ ರಾಜಧಾನಿಯಲ್ಲಿ ಜೋರು ಮಳೆಯಾಗಲಿದ್ದು ರಾಜಾ ಕಾಲುವೆಗಳಲ್ಲಿ ನೀರಿನ ಹರಿವಿನ ಪ್ರಮಾಣ ಹೆಚ್ಚಾಗಲಿದೆ. ಇದರಿಂದ ಅಕ್ಕಪಕ್ಕದ ಮನೆಗಳು ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಸಂಭವ ಇದೆ ಎನ್ನುವ ಎಚ್ಛರಿಕೆಯನ್ನು ಕೂಡ ನೀಡಿದೆ.
ಒಟ್ಟಿನಲ್ಲಿ ಕಳೆದ ವರ್ಷ ಬಿಬಿಎಂಪಿಯ ನಿರ್ಲಕ್ಷದಿಂದ ಜೀವಹಾನಿಯಾಗಿತ್ತು. ಇಷ್ಟಾದರೂ ಎಚ್ಚೆತ್ತುಕೊಳ್ಳದ ಬಿಬಿಎಂಪಿ ಇನ್ನು ರಾಜಕಾಲುವೆಗಳಲ್ಲಿ ಹೂಳು ತೆಗೆಯುವ ಕೆಲಸ, ನೀರಿನ ಸರಾಗ ಹರಿವಿಗೆ ಕ್ರಮ ಕೈಗೊಂಡಿಲ್ಲ. ನಾಳೆಯಿಂದ ಸುರಿಯುವ ಮಳೆಗೆ ಪಾಲಿಕೆ ಸಿಬ್ಬಂದಿ ಯಾವ ರೀತಿ ಕಾರ್ಯ ನಿರ್ವಹಿಸುತ್ತಾರೆ ಎಂದು ಕಾದು ನೊಡಬೇಕಿದೆ.
Comments are closed.