ಕರ್ನಾಟಕ

ಉಪ ಚುನಾವಣೆ: ಬಳ್ಳಾರಿ ಕ್ಷೇತ್ರದಿಂದ ಸ್ಪರ್ಧಿಸಲಿರುವ ಶ್ರೀರಾಮುಲು ಸಹೋದರಿ ಜೆ.ಶಾಂತ !

Pinterest LinkedIn Tumblr

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗದ ಲೋಕಸಭೆ ಉಪಚುನಾವಣೆ ದಿನಾಂಕ ಘೋಷಣೆ ಮೂರು ಪಕ್ಷಗಳಿಗೂ ಶಾಕ್ ನೀಡಿದ್ದು, ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಮೂರು ಪಕ್ಷಗಳು ಕುಟುಂಬ ರಾಜಕಾರಣದಲ್ಲಿ ಕಾರ್ಯಮಗ್ನರಾಗಿವೆ.

ಉಪಚುನಾವಣೆ ಮೂರು ಪಕ್ಷಗಳಿಗು ಅತ್ಯಂತ ದೊಡ್ಡ ಚುನಾವಣೆ ಅಲ್ಲದೇ ಹೋದರೂ ಪ್ರತಿಷ್ಠೆಯ ಕಣವಾಗಿದೆ. ನಾಲ್ಕು ತಿಂಗಳ ಭಾಗ್ಯಕ್ಕೆ ಚುನಾವಣೆ ನಡೆಯುವುದಾದರೂ ಈ ಚುನಾವಣೆಯಲ್ಲಿ ತನ್ನ ಅಸ್ತಿತ್ವವನ್ನು ಸಾಬೀತು ಮೂಡುವುದು ಮೂರು ಪಕ್ಷಗಳಿಗೂ ಅನಿವಾರ್ಯವಾಗಿದೆ. ಹೀಗಾಗಿ ಗೆಲ್ಲುವ ಅಭ್ಯರ್ಥಿಯನ್ನು ತಮ್ಮ ತಮ್ಮ ಕ್ಷೇತ್ರಗಳಲ್ಲಿ ನಿಲ್ಲಿಸಲು ಮೂರು ಪಕ್ಷಗಳೂ ಹುಡುಕಾಟ ಆರಂಭಿಸಿವೆ.

ಈ ನಡುವೆ ಬಿಜೆಪಿ ಬಲಿಷ್ಠ ನಾಯಕರೆಂದೇ ಹೇಳಲಾಗುವ ಬಿ. ಶ್ರೀರಾಮುರು ಅವರ ಸಹೋದರಿ ಜೆ.ಶಾಂತ ಅವರನ್ನು ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ನಿಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿವೆ.

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರು ರಾಮನಗರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದರೂ ಬಿಜೆಪಿ ಅನಿತಾ ಕುಮಾರಸ್ವಾಮಿಯವರ ವಿರುದ್ಧ ಜಿಲ್ಲಾ ಬಿಜೆಪಿ ಅಧ್ಯಕ್ಷ ರುದ್ರೇಶ್ ಅವರನ್ನು ನಿಲ್ಲಿಸಲು ನಿರ್ಧರಿಸಿದೆ.

ಬಳ್ಳಾರಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳನ್ನು ನಿಲ್ಲಿಸುವ ಆಯ್ಕೆಯನ್ನು ಬಿಜೆಪಿ ಶ್ರೀರಾಮುಲು ಅವರಿಗೇ ನೀಡಿದ್ದು, ಹೀಗಾಗಿ ಸಹೋದರಿ ಶಾಂತ ಅವರನ್ನೇ ನಿಲ್ಲಿಸಲು ಶ್ರೀರಾಮುಲು ನಿರ್ಧರಿಸಿದ್ದಾರೆಂದು ಹೇಳಲಾಗುತ್ತಿದೆ.

ಇನ್ನು ಕಾಂಗ್ರೆಸ್ ಶಾಸಕ ನಾಗೇಂದ್ರ ಅವರ ಸಹೋದರ ವೆಂಕಟೇಶ್ ಪ್ರಸಾದ್ ಅವರನ್ನು ಕಣಕ್ಕೆ ಇಳಿಸಲು ಕಾಂಗ್ರೆಸ್ ಚಿಂದನೆ ನಡೆಸುತ್ತಿದ್ದು, ಬಿ.ರಾಮಪ್ರಸಾದ್ ಕೂಡ ಚುನಾವಣಾ ಕಣಕ್ಕಿಳಿಯುವ ಆಕಾಂಕ್ಷೆಯಲ್ಲಿದ್ದಾರೆ.

ಈ ನಡುವೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಪುತ್ರ ಬಿ.ವೈ. ರಾಘವೇಂದ್ರ ಅವರನ್ನು ಕಣಕ್ಕಿಳಿಸುವ ಸುಳಿವನ್ನು ಈಗಾಗಲೇ ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸಿಎಂ ಕುಮಾರಸ್ವಾಮಿಯವರು ಪುತ್ರ ನಿಖಿಲ್ ಕುಮಾರಸ್ವಾಮಿಯವರನ್ನು ನಿಲ್ಲಿಸಲು ನಿರ್ಧರಿಸಿದ್ದಾರೆ, ಈ ಹಿನ್ನಲೆಯಲ್ಲಿ ಬಿಜೆಪಿ ಬಲಿಷ್ಠ ಅಭ್ಯರ್ಥಿಯನ್ನು ಮಂಡ್ಯ ಕ್ಷೇತ್ರದಲ್ಲಿ ನಿಲ್ಲಿಸಲು ಹುಡುಕಾಟ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕೆಂಬುದರ ಕುರಿತಂತೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. 1-2 ದಿನಗಳಲ್ಲಿ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗುತ್ತದೆ ಎಂದು ಜೆಡಿಎಸ್ ವರಿಷ್ಠ ದೇವೇಗೌಡ ಅವರು ಹೇಳಿದ್ದಾರೆ.

Comments are closed.