ಕರ್ನಾಟಕ

ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ : ಭಾರತೀಯ ಕ್ರೀಡಾ ಪ್ರಾಧಿಕಾರದ ಕಬಡ್ಡಿ ಕೋಚ್’ಗಾಗಿ ಪೊಲೀಸರ ಹುಡುಕಾಟ

Pinterest LinkedIn Tumblr

ಬೆಂಗಳೂರು: 13 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಭಾರತೀಯ ಕ್ರೀಡಾ ಪ್ರಾಧಿಕಾರದ ಕಬ್ಬಡಿ ತರಬೇತಿದಾರರೊಬ್ಬರನ್ನು ಜ್ಞಾನಭಾರತಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

59 ವರ್ಷದ ಕಬಡ್ಡಿ ತರಬೇತುದಾರ ಹೊಸಮನಿ ಬೆಂಗಳೂರು ವಿಶ್ವವಿದ್ಯಾಲಯ ಆವರಣದ ಬಳಿ ಇರುವ ಭಾರತೀಯ ಕ್ರೀಡಾ ಪ್ರಾಧಿಕಾರದಲ್ಲಿ ಗುರುವಾರ ಸಂಜೆ ಬಟ್ಟೆ ಬದಲಾಯಿಸುವ ಕೊಠಡಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬುದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಘಟನೆ ನಡೆದ ನಂತರ ಆತ ಭಾರತೀಯ ಕ್ರೀಡಾ ಪ್ರಾಧಿಕಾರದ ಕಚೇರಿಗೆ ಬಾರದೆ ತಲೆಮರೆಸಿಕೊಂಡಿದ್ದು, ಕ್ರೀಡಾ ಸಂಸ್ಥೆಯಿಂದ ಅಧಿಕೃತವಾಗಿ ದೂರು ದಾಖಲಿಸಲಾಗಿದೆ.

ಈ ಮಧ್ಯೆ , ಹೊಸಮನಿ ತಮ್ಮ ಮನೆಯಲ್ಲಿಯೇ ಮೊಬೈಲ್ ಪೋನ್ ಬಿಟ್ಟು ಹೋಗಿದ್ದು, ಎಲ್ಲಿ ಹೋಗಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕುಟುಂಬ ಸದಸ್ಯರು ಹೇಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುರುವಾರ ಸಂಜೆ 4-15ರ ಸುಮಾರಿನಲ್ಲಿ ಸಭಾಂಗಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಎಲ್ಲ ಕ್ರೀಡಾಪಟುಗಳು ಹಾಗೂ ತರಬೇತುದಾರರು ಹಾಜರಾಗಿದ್ದರು. ಬಾಲಕಿ ಬಟ್ಟೆ ಬದಲಾಯಿಸಲು ಕೊಠಡಿಗೆ ತೆರಳಿದ ವೇಳೆ ಅಲ್ಲಿದ್ದ ಹೊಸಮನಿ ಲೈಂಗಿಕ ಕಿರುಕುಳ ನೀಡಿರುವುದರ ಬಗ್ಗೆ ಪೋಷಕರ ಗಮನಕ್ಕೆ ತಂದಿದ್ದಾರೆ.

ನಂತರ ಆ ಬಾಲಕಿಯ ಪೋಷಕರು ಹೊಸಮನಿ ಮೇಲೆ ಹಲ್ಲೆ ನಡೆಸಿ, ಕಚೇರಿಗೆ ಬಂದು ದೂರು ಸಲ್ಲಿಸಿದ್ದಾರೆ. ಈ ಮಧ್ಯೆ ಕೋಚ್ ಘಟನೆ ಬಗ್ಗೆ ತಪ್ಪೊಪ್ಪಿಕೊಂಡಿದ್ದು, ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಘತನೆ ಬಗ್ಗೆ ತನಿಖೆ ನಡೆಸುವುದಾಗಿ ಭಾರತೀಯ ಕ್ರೀಡಾ ಪ್ರಾಧಿಕಾರದ ಅಧಿಕಾರಿಗಳು ಭರವಸೆ ನೀಡಿದ್ದಾರೆ.

Comments are closed.