ಕರ್ನಾಟಕ

ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ, ಹರಿಶೇಖರನ್, ರಾಹುಲ್ ಕುಮಾರ್ ಸೇರಿ ಐದು ಐಪಿಎಸ್ ಅಧಿಕಾರಿಗಳ ವರ್ಗ!

Pinterest LinkedIn Tumblr

ಬೆಂಗಳೂರು: ಕರ್ನಾಟಕ ಸಿಎಂ ಆಗಿ ಎಚ್ ಡಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದ ಬಳಿಕ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಸರಣಿ ಮುಂದುವರೆದಿದ್ದು, ಇದೀಗ ಮತ್ತೆ ಐದು ಐಪಿಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಪ್ರಮುಖವಾಗಿ ರಾಜ್ಯದ ವಿವಿಧೆಡೆ ಕಾರ್ಯ ನಿರ್ವಹಿಸುತ್ತಿದ್ದ ಖಡಕ್ ಪೊಲೀಸ್ ಅಧಿಕಾರಿಗಳನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಪೊಲೀಸ್​​ ಸಿಂಗಂ ಖ್ಯಾತಿಯ ಕೆ.ಅಣ್ಣಾಮಲೈ, ಹರಿಶೇಖರನ್, ಅಜಯ್ ಹಿಲೋರಿ, ರಾಹುಲ್ ಕುಮಾರ್ ಮತ್ತು ಹರೀಶ್‌ ಪಾಂಡೆ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ.

ಈ ಹಿಂದೆ ಅಲೋಕ್ ಕುಮಾರ್ ಮತ್ತು ಗಿರೀಶ್ ಅವರಂತಹ ಖಡಕ್ ಪೊಲೀಸ್ ಅಧಿಕಾರಿಗಳನ್ನು ಸಿಸಿಬಿಗೆ ಹಾಕಿ, ದಂಧೆಕೋರರಿಗೆ ಬಿಸಿ ಮುಟ್ಟಿಸಿದ್ದ ರಾಜ್ಯ ಸರ್ಕಾರ ಇದೀಗ ಸಿಲಿಕಾನ್ ಸಿಟಿ ಭೂಮಾಫಿಯ ದಂಧೆಗೆ ಶಾಕ್ ನೀಡವು ಇಂತಹ ಕ್ರಮಕ್ಕೆ ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಚಿಕ್ಕಮಗಳೂರು ಜಿಲ್ಲಾ ಎಸ್​ಪಿಯಾಗಿದ್ದ ಕೆ. ಅಣ್ಣಾಮಲೈ ಅವರನ್ನ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ವಿಭಾಗದ ಹೆಚ್ಚುವರಿ ಸಂಚಾರ ಆಯುಕ್ತರಾಗಿ ಹರಿಶೇಖರನ್, ಕೆಎಸ್‍ಆರ್‍ ಪಿ 1ನೇ ಬೆಟಾಲಿಯನ್ ಕಮಾಂಡೆಂಟ್‍ಗೆ ಅಜಯ್ ಹಿಲೋರಿ ಹಾಗೂ ಚಿಕ್ಕಮಗಳೂರು ಎಸ್‍ ಪಿಯಾಗಿ ಹರೀಶ್ ಪಾಂಡೆ ಅವರು ವರ್ಗಾವಣೆಯಾಗಿದ್ದಾರೆ.

ಉಳಿದಂತೆ ರಾಹುಲ್ ಕುಮಾರ್ ಅವರನ್ನು ಡಿಸಿಪಿ ಪೂರ್ವ ವಿಭಾಗ ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ.

Comments are closed.