ಕರ್ನಾಟಕ

ಮನೆ ಬಾಗಿಲಿಗೇ ಮದ್ಯ ಪೂರೈಕೆ?

Pinterest LinkedIn Tumblr


ಬೆಂಗಳೂರು: ಈಗಾಗಲೇ ಮಹಾರಾಷ್ಟ್ರ ಸರ್ಕಾರ ಮನೆ ಬಾಗಿಲಿಗೇ ಮದ್ಯ ಪೂರೈಕೆ ಮಾಡುವ ಯೋಜನೆಯನ್ನು ಜಾರಿಗೆ ತರಲು ಹೊರಟಿದೆ. ಈಗ ಅದೇ ಮಾದರಿಯಲ್ಲಿ ಕರ್ನಾಟಕ ಕೂಡ ಆನ್​ಲೈನ್​ನಲ್ಲೇ ಮದ್ಯ ಮಾರಾಟ ವ್ಯವಸ್ಥೆ ಜಾರಿಗೆ ತರುವ ನಿರೀಕ್ಷೆ ಇದೆ.

ಹೌದು, ಮನೆ ಬಾಗಿಲಿಗೇ ಮದ್ಯ ಸರಬರಾಜು ಮಾಡಲು ಅಬಕಾರಿ ಇಲಾಖೆ ನಿರ್ಧರಿಸಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಈ ಕುರಿತು ಇಲಾಖೆ ಅಧಿಕಾರಿಗಳು ರಿಟೇಲ್ ಅಂಗಡಿಗಳ ಮಾಲೀಕರು ಮತ್ತು ಪಾಲುದಾರರ ಜತೆ ರ್ಚಚಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.

ಒಂದು ವೇಳೆ ಆನ್​ಲೈನ್​ನಲ್ಲೇ ಮದ್ಯ ಸರಬರಾಜಾಗುವ ವ್ಯವಸ್ಥೆ ಜಾರಿಗೆ ಬಂದರೆ ಪ್ರತಿ ವರ್ಷ 1500ರಿಂದ 2 ಸಾವಿರ ಕೋಟಿ ರೂ. ಆದಾಯ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದೆ.

Comments are closed.